ಟಿ20 ವಿಶ್ವಕಪ್​ಗೆ ಬಲಿಷ್ಠ ಭಾರತ ಮಹಿಳಾ ತಂಡ ಪ್ರಕಟ: ಉದಯೋನ್ಮುಖ ಆಟಗಾರ್ತಿಯರಿಗೆ ಮಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ದಕ್ಷಿಣ ಆಫ್ರಿಕಾದ ಆತಿಥ್ಯದಲ್ಲಿ ಫೆಬ್ರವರಿ 10 ರಿಂದ ಆರಂಭವಾಗಲಿರುವ ಐಸಿಸಿ ಮಹಿಳಾ ಟಿ 20 ವಿಶ್ವಕಪ್ ಗೆ ಭಾರತ ತಂಡ ಪ್ರಕಟಿಸಲಾಗಿದೆ. ಭಾರತವು ಫೆಬ್ರವರಿ 12 ರಂದು ಪಾಕಿಸ್ತಾನದ ವಿರುದ್ಧ ಕೇಪ್ ಟೌನ್‌ನಲ್ಲಿ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ.
ಭಾರತವು ಇಂಗ್ಲೆಂಡ್, ವೆಸ್ಟ್ ಇಂಡೀಸ್, ಪಾಕಿಸ್ತಾನ ಮತ್ತು ಐರ್ಲೆಂಡ್‌ನೊಂದಿಗೆ ಗುಂಪು 2 ರಲ್ಲಿದೆ. ಗುಂಪು ಹಂತದ ಕೊನೆಯಲ್ಲಿ ಪ್ರತಿ ಗುಂಪಿನಲ್ಲಿ ಅಗ್ರ ಎರಡು ತಂಡಗಳು ಸೆಮಿಫೈನಲ್‌ನಲ್ಲಿ ಆಡುತ್ತವೆ. ಫೆಬ್ರವರಿ 26 ರಂದು ಫೈನಲ್ ನಡೆಯಲಿದೆ.
ಹರ್ಮನ್‌ಪ್ರೀತ್ ಕೌರ್ ತಂಡವನ್ನು ಮುನ್ನಡೆಸಲಿದ್ದು, ಸ್ಮೃತಿ ಮಂಧಾನ ಉಪನಾಯಕಿಯಾಗಲಿದ್ದಾರೆ. ಅನುಭವಿ ವೇಗಿ ಶಿಖಾ ಪಾಂಡೆ ಕೂಡ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವಿವಾದಾತ್ಮಕವಾಗಿ ತಂಡದಿಂದ ಕೈಬಿಡುವ ಮೊದಲು ಅವರು ಅಕ್ಟೋಬರ್ 2021 ರಲ್ಲಿ ಕೊನೆಯದಾಗಿ ಭಾರತಕ್ಕಾಗಿ ಆಡಿದ್ದರು. ಆಕೆಯ ಸೇರ್ಪಡೆಯು ವೇಗದ ಬೌಲಿಂಗ್ ವಿಭಾಗದಲ್ಲಿ ಬಲಿಷ್ಠತೆಯನ್ನು ತರಲಿದೆ. ಚೆಂಡನ್ನು ಸ್ವಿಂಗ್ ಮಾಡುವ ಶಕ್ತಿ ಹೊಂದಿರುವ 33 ವರ್ಷ ವಯಸ್ಸಿನ ಆಟಗಾರ್ತಿ ಶಿಖಾ ಮೂರು ಟೆಸ್ಟ್, 55 ಏಕದಿನ ಮತ್ತು 56 T20 ಗಳಲ್ಲಿ ಕಾಣಿಸಿಕೊಂಡ ಅನುಭವಿಯಾಗಿದ್ದಾರೆ.
ಟಿ20 ವಿಶ್ವಕಪ್‌ಗೂ ಮುನ್ನ ಭಾರತ ತಂಡ ಜನವರಿ 19ರಿಂದ ದಕ್ಷಿಣ ಆಫ್ರಿಕಾದಲ್ಲಿ ತ್ರಿಕೋನ ಸರಣಿ ಆಡಲಿದೆ.

ಟಿ 20 ವಿಶ್ವಕಪ್ ಗೆ ಭಾರತ ತಂಡ:
ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ಯಾಸ್ತಿಕಾ ಭಾಟಿಯಾ (wk), ರಿಚಾ ಘೋಷ್ (wk) ಜೆಮಿಮಾ ರೋಡ್ರಿಗಸ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ರಾಧಾ ಯಾದವ್, ರೇಣುಕಾ ಠಾಕೂರ್, ಅಂಜಲಿ ಸರ್ವಾಣಿ, ಪೂಜಾ ವಸ್ತ್ರಾಕರ್, ರಾಜೇಶ್ವರಿ ಗಾಯಕ್ವಾಡ್, ಶಿಖಾ ಪಾಂಡೆ.

ಮೀಸಲು ಆಟಗಾರ್ತಿಯರು: ಸಬ್ಬಿನೇನಿ ಮೇಘನಾ, ಸ್ನೇಹ ರಾಣಾ, ಮೇಘನಾ ಸಿಂಗ್.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!