Sunday, September 25, 2022

Latest Posts

ಏಷ್ಯಾಕಪ್‌ ಗೆ ಭಾರತ ಮಹಿಳಾ ತಂಡ ಪ್ರಕಟ: ಕನ್ನಡತಿಗೆ ಸ್ಥಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಅಕ್ಟೋಬರ್ 1 ರಿಂದ 15 ರವರೆಗೆ ಬಾಂಗ್ಲಾದೇಶದ ಸಿಲ್ಹೆಟ್‌ನಲ್ಲಿ ನಡೆಯಲಿರುವ ಮಹಿಳಾ ಏಷ್ಯಾ ಕಪ್ ಟಿ20 ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ.
ಹರ್ಮನ್‌ಪ್ರೀತ್ ಕೌರ್ ತಂಡವನ್ನು ಮುನ್ನಡೆಸಲಿದ್ದಾರೆ. ತಂಡದಲ್ಲಿ ಕನ್ನಡತಿ ರಾಜೇಶ್ವರಿ ಗಾಯಕವಾಡ್‌ ಸ್ಥಾನ ಪಡೆದಿದ್ದಾರೆ. ತಾನಿಯಾ ಭಾಟಿಯಾ, ಸಿಮ್ರಾನ್ ದಿಲ್ ಬಹದ್ದೂರ್ ಅವರನ್ನು ಸ್ಟ್ಯಾಂಡ್‌ಬೈ ಆಟಗಾರರನ್ನಾಗಿ ಹೆಸರಿಸಲಾಗಿದೆ.
ಅಕ್ಟೋಬರ್ 1 ರಿಂದ ಪಂದ್ಯಾವಳಿಯು ಪ್ರಾರಂಭವಾಗಲಿದೆ. ಅಕ್ಟೋಬರ್ 15 ರಂದು ಫೈನಲ್‌ ಪಂದ್ಯ ನಡೆಯಲಿದೆ. ಟೂರ್ನಿಯಲ್ಲಿ ಭಾರತ, ಪಾಕಿಸ್ತಾನ, ಶ್ರೀಲಂಕಾ, ಥಾಯ್ಲೆಂಡ್, ಮಲೇಷ್ಯಾ, ಯುಎಇ ಮತ್ತು ಬಾಂಗ್ಲಾದೇಶ ಏಷ್ಯನ್ ಕಪ್‌ ಗಾಗಿ ಸೆಣಸಾಡಲಿವೆ.
ಭಾರತವು ಉದ್ಘಾಟನಾ ದಿನದಂದು ಶ್ರೀಲಂಕಾ ವಿರುದ್ಧ ತನ್ನ ಅಭಿಯಾನವನ್ನು ಪ್ರಾರಂಭಿಸಲಲಿದೆ. ಈ ಪಂದ್ಯವು ಮಧ್ಯಾಹ್ನ 1:30 ಕ್ಕೆ ಪ್ರಾರಂಭವಾಗುತ್ತದೆ.
ಭಾರತವು ಸೆಮಿಫೈನಲ್‌ಗಳನ್ನು ನಿರ್ಧರಿಸುವ ಮೊದಲು ರೌಂಡ್-ರಾಬಿನ್ ಮಾದರಿಯಲ್ಲಿ ಒಟ್ಟು ಆರು ಪಂದ್ಯಗಳನ್ನು ಆಡುತ್ತದೆ ಮತ್ತು ಪಂದ್ಯಾವಳಿಯ ಫೈನಲ್‌ಗೆ ಪ್ರವೇಶಿಸುವ ಭರವಸೆ ಹೊಂದಿದೆ.

ಏಷ್ಯಾಕಪ್‌ ಗೆ ಭಾರತ ಮಹಿಳಾ ತಂಡ:
ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ದೀಪ್ತಿ ಶರ್ಮಾ, ಶಫಾಲಿ ವರ್ಮಾ, ಜೆಮಿಮಾ ರಾಡ್ರಿಗಸ್, ಸಬ್ಬಿನೇನಿ ಮೇಘನಾ, ರಿಚಾ ಘೋಷ್ (ವಿಕೆಟ್-ಕೀಪರ್), ಸ್ನೇಹ್ ರಾಣಾ, ದಯಾಳನ್ ಹೇಮಲತಾ, ಮೇಘನಾ ಸಿಂಗ್, ರೇಣುಕಾ ವಸ್ತ್ರಕರ್, ರಾಜೇಶ್ವರಿ ಗಾಯಕವಾಡ, ರಾಧಾ ಯಾದವ್, ಕೆ.ಪಿ.ನವಗಿರೆ.
ಸ್ಟ್ಯಾಂಡ್‌ಬೈ ಆಟಗಾರರು: ತನಿಯಾ ಸಪ್ನಾ ಭಾಟಿಯಾ, ಸಿಮ್ರಾನ್ ದಿಲ್ ಬಹದ್ದೂರ್.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!