ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್ ಫೈನಲ್: BCCI ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅಹಮದಾಬಾದ್ ಮತ್ತು ಕೋಲ್ಕತಾದಲ್ಲಿಐಪಿಎಲ್ 2022ರ ಪ್ಲೇಆಫ್ ಹಂತವು ನಡೆಯಲಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಕಾರ್ಯದರ್ಶಿ ಜಯ್ ಶಾ ಮಂಗಳವಾರ ದೃಢಪಡಿಸಿದ್ದಾರೆ.
ಇನ್ನು ಮೇ 29ರಂದು ಐಪಿಎಲ್ 2022ರ ಫೈನಲ್ ಪಂದ್ಯವು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಹೇಳಿದರು.

ಈ ಬಗ್ಗೆ ಮಾತನಾಡಿದ ಅವರು, ಐಪಿಎಲ್ 2022ರ ಪ್ಲೇಆಫ್ ಹಂತವು ಅಹಮದಾಬಾದ್ ಮತ್ತು ಕೋಲ್ಕತಾದಲ್ಲಿ ನಡೆಯಲಿದೆ ಎಂದು ಘೋಷಿಸಲು ಸಂತೋಷವಾಗಿದೆ. ಮೇ 29ರಂದು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮೆಗಾ ಫೈನಲ್ ಮತ್ತು ಮೇ 27ರಂದು ಕ್ವಾಲಿಫೈಯರ್ 2 ನಡೆಯಲಿದೆ. ಮೇ 24-25ರಂದು ಈಡನ್ ಗಾರ್ಡನ್ಸ್ನಲ್ಲಿ ಕ್ವಾಲಿಫೈಯರ್ 1 ಮತ್ತು ಎಲಿಮಿನೇಟರ್ ಪಂದ್ಯಗಳು ನಡೆಯಲಿವೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಎಎನ್‌ಐಗೆ ತಿಳಿಸಿದ್ದಾರೆ.

ಇನ್ನುಈ ವರ್ಷ ಮಹಿಳಾ ಟಿ20 ಚಾಲೆಂಜ್ ಪುನರಾರಂಭಗೊಳ್ಳಲಿದ್ದು, ಪುಣೆ ನಾಲ್ಕನೇ ಆವೃತ್ತಿಯ ಪಂದ್ಯಾವಳಿಗೆ ಆತಿಥ್ಯ ವಹಿಸಲಿದೆ. ಪಂದ್ಯಗಳ ದಿನಾಂಕಗಳು ಮೇ 23, ಮೇ 24, ಮೇ 26 ಮತ್ತು ಫೈನಲ್ ಮೇ 28 ರಂದು ನಡೆಯಲಿವೆ’ ಎಂದು ಅವರು ಹೇಳಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!