ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಸ್ಸಾಂನ ಮಾಜಿ ಕ್ರಿಕೆಟಿಗ ದೇವಜಿತ್ ಸೈಕಿಯಾ ಅವರನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ನೂತನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಅಧ್ಯಕ್ಷರಾಗಿ ಜಯ್ ಶಾ ಆಯ್ಕೆಯಾದ ಬಳಿಕ ತೆರವಾಗಿದ್ದ ಸ್ಥಾನಕ್ಕೆ ಒಂದು ತಿಂಗಳ ಬಳಿಕ ಸೈಕಿಯಾ ನೇಮಕಗೊಂಡಿದ್ದಾರೆ ಎಂದು ವರದಿಯಾಗಿದೆ.
ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಕೋಚ್ ಗೌತಮ್ ಗಂಭೀರ್ ಅವರೊಂದಿಗೆ ಸಭೆಯಲ್ಲಿ ಪಾಲ್ಗೊಂಡಿದ್ದರು.