ಡ್ರೆಸ್ಸಿಂಗ್‌ ರೂಮ್‌ ಸೀಕ್ರೆಟ್ಸ್‌ ಲೀಕ್‌ ಮಾಡ್ತಿದ್ದ ನಾಲ್ವರು ಕೋಚಿಂಗ್‌ ಸಿಬ್ಬಂದಿಯನ್ನ ಕಿತ್ತೆಸೆದ ಬಿಸಿಸಿಐ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಡ್ರೆಸ್ಸಿಂಗ್‌ ರೂಮ್‌ ಮಾಹಿತಿ ಸೋರಿಕೆ ಮಾಡುತ್ತಿದ್ದ ಆರೋಪದ ಮೇಲೆ ಸಹಾಯಕ ಕೋಚ್‌ ಹಾಗೂ ಫೀಲ್ಡಿಂಗ್‌ ಕೋಚ್‌ ಸೇರಿ ನಾಲ್ವರು ಕೋಚಿಂಗ್‌ ಸಿಬ್ಬಂದಿಯನ್ನ ಕಿತ್ತೆಸೆದಿದೆ.

ಬ್ಯಾಟಿಂಗ್ ಕೋಚ್, ಫೀಲ್ಡಿಂಗ್ ಕೋಚ್, ಸ್ಟ್ರೆಂತ್ ಅಂಡ್ ಕಂಡೀಷನಿಂಗ್ ಕೋಚ್ ಮತ್ತು ಮಸಾಜರ್ ಸಿಬ್ಬಂದಿಯನ್ನ ಬಿಸಿಸಿಐ ತೆಗೆದುಹಾಕಿದೆ. ಇದರಲ್ಲಿ ಟೀಂ ಇಂಡಿಯಾದ ಮುಖ್ಯಕೋಚ್‌ ಗೌತಮ್‌ ಗಂಭೀರ್‌ ಅವರ ಆಪ್ತ ಅಭಿಷೇಕ್‌ ನಾಯರ್‌ ಅವರನ್ನೂ ವಜಾಗೊಳಿಸಿರುವುದು ಗಮನಾರ್ಹ. ಗಂಭೀರ್‌ ಕೋಲ್ಕತ್ತಾ ನೈಟ್‌ರೈಡರ್ಸ್‌ ಫ್ರಾಂಚೈಸಿಯಲ್ಲಿದ್ದಾಗಲೇ ನಾಯ್‌ ಆಪ್ತರಾಗಿದ್ದರು.

ಗಂಭೀರ್‌ ಟೀಂ ಇಂಡಿಯಾ ಕೋಚ್‌ ಆದ ಬಳಿಕ ಸಹಾಯಕ, ಬ್ಯಾಟಿಂಗ್‌ ಕೋಚ್‌ ಆಗಿ ಅವರನ್ನ ನೇಮಕ ಮಾಡಿಕೊಳ್ಳಲಾಯಿತು. ಸದ್ಯ ಮುಂಬರುವ ಇಂಗ್ಲೆಂಡ್‌ ವಿರುದ್ಧ ಟೆಸ್ಟ್‌ ಸರಣಿಯೊಳಗೆ ಈ ಹುದ್ದೆಗೆ ಬೇರೆಯವರನ್ನು ಆಯ್ಕೆ ಮಾಡಲು ಬಿಸಿಸಿಐ ನಿರ್ಧರಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!