ಹೊಸದಿಗಂತ ಡಿಜಿಟಲ್ ಡೆಸ್ಕ್:
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿಸಿಸಿಐ ಕಾರ್ಯದರ್ಶಿ ಮತ್ತು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಪುತ್ರ ಜಯ್ ಶಾ ಭೇಟಿ ನೀಡಿದ್ದಾರೆ. ಶ್ರೀ ದೇವರಿಗೆ ಆಶ್ಲೇಷಬಲಿ ಸೇವೆ ಸಮರ್ಪಿಸಿದರು.
ಇವರೊಂದಿಗೆ ಪತ್ನಿ ರಿಷಿತಾ ಶಾ ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.
ಶ್ರೀ ದೇವಳದ ಒಳಗೆ ಆರಂಭದಲ್ಲಿ ಸಂಕಲ್ಪ ನೆರವೇರಿಸಿ ಆಶ್ಲೇಷ ಬಲಿ ಸೇವೆ ಸಮರ್ಪಿಸಿದರು.ಬಳಿಕ ಆಶ್ಲೇಷ ಬಲಿ ಪ್ರಸಾದ ಸ್ವೀಕರಿಸಿದರು. ಶ್ರೀ ದೇವಳದಲ್ಲಿ ಶಾ ಕುಟುಂಬಸ್ಥರು ಪ್ರಸಾದ ಬೋಜನ ಸ್ವೀಕರಿಸಿದರು.ನಂತರ ಕೇಂದ್ರ ಗೃಹ ಮಂತ್ರಿ ಅಮಿ ಶಾ ಅವರ ಹೆಸರಿನಲ್ಲಿ ಶ್ರೀ ದೇವಳದಲ್ಲಿ ನಡೆಯುವ ನಿತ್ಯ ಅನ್ನ ದಾಸೋಹಕ್ಕೆ ದೇಣಿಗೆ ನೀಡಿ ಪ್ರಸಾದ ಸ್ವೀಕರಿಸಿದರು.
ಶ್ರೀ ದೇವರ ದರುಶನದಿಂದ ಅತೀವ ಸಂತಸ
ದೇಶ ವಿದೇಶಗಳಲ್ಲಿ ಪ್ರಖ್ಯಾತಿ ಪಡೆದ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದು ಶ್ರೀ ದೇವರ ದರುಶನ ಪಡೆದುದು ಅತೀವ ಸಂತಸ ತಂದಿದೆ. ನನಗೆ ಶ್ರೀ ದೇವರ ದರುಶನ ಮಾಡಿ ಸೇವೆ ನೆರವೇರಿಸಲು ಉತ್ತಮವಾದ ವ್ಯವಸ್ಥೆ ಮಾಡಿಕೊಟ್ಟ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ, ಸದಸ್ಯರಿಗೆ ಮತ್ತು ದೇವಳದ ಆಡಳಿತ ಮಂಡಳಿಗೆ ತುಂಬು ಹೃದಯದ ಧನ್ಯವಾದಗಳು.ಮುಂದೆ ಅನೇಕ ಬಾರಿ ಶ್ರೀ ಕ್ಷೇತ್ರಕ್ಕೆ ಆಗಮಿಸಿ ಶ್ರೀ ದೇವರ ದರುಶನ ಪಡೆಯುವ ಕನಸು ಹೊಂದಿದ್ದೇನೆ.ಇದನ್ನು ಶ್ರೀ ದೇವರು ನೆರವೇರಿಸುತ್ತಾರೆ ಎಂಬ ನಂಬಿಕೆ ನನ್ನದು ಎಂದು ಜಯ್ ಶಾ ಹೇಳಿದರು.