ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ.. ಫೆ.28ರೊಳಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

2022-23ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ಮರುಪಾವತಿ”, “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ವಿದ್ಯಾರ್ಥಿವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಫೆಬ್ರವರಿ 28,2023ರ ವರೆಗೆ ವಿಸ್ತರಿಸಲಾಗಿದೆ.

ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 28,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770005
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಅಧಿಕೃತ ವೆಬ್‌ಸೈಟ್: https://ssp.postmatric.karnataka.gov.in/
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್: http://backwardclasses.kar.nic.in/

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!