ಭಾರತೀಯ ಸೇನೆ, ಯೂನಿಫಾರ್ಮ್‌ ಸೇವೆಗಳಿಗೆ ಉಚಿತ ತರಬೇತಿ: ಆಸಕ್ತರಿಂದ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2023-24ನೇ ಸಾಲಿನ ಸೇನಾ ಆಯ್ಕೆ ಪೂರ್ವ ತರಬೇತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್‌ 15,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಪ್ರಸಕ್ತ ಸಾಲಿನಲ್ಲಿ ಉಚಿತವಾಗಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ನೀಡುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳು, ತರಬೇತಿಯ ವಿವರ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಓದಿ ತಿಳಿಯಿರಿ.

ವಿದ್ಯಾರ್ಹತೆ:

ಅಭ್ಯರ್ಥಿಯು 10ನೇ ತರಗತಿಯನ್ನು ಉತ್ತೀರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಟ 33 ಅಂಕಗಳನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಂ ಇದ್ದಲ್ಲಿ ಸಮಾನವಾದ ಗ್ರೇಡ್ ಪಡೆದಿರಬೇಕು.

ಅರ್ಹತೆಗಳು:

ಅಭ್ಯರ್ಥಿಯ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿಯು ಪ್ರವರ್ಗ-1ರ ರೂ.2.50 ಲಕ್ಷ ಹಾಗೂ ಪ್ರವರ್ಗ-2(ಎ),3(ಎ) ಮತ್ತು 3(ಬಿ)ರ ರೂ.1 ಲಕ್ಷ ಇರಬೇಕು.

ವಯೋಮಿತಿ:

ಡಿಸೆಂಬರ್-31 2023ರ ಅನ್ವಯ ಅಭ್ಯರ್ಥಿಯ ವಯಸ್ಸನ್ನು ಪರಿಗಣಿಸಲಾಗುವುದು. ಅಭ್ಯರ್ಥಿಯು 1 ಜನವರಿ 2023 ರಿಂದ 1 ಜುಲೈ 2006 (17ವರೆ ವರ್ಷದಿಂದ 21 ವರ್ಷ)ರ ದಿನಾಂಕಗಳ ನಡುವೆ ಜನಿಸಿರಬೇಕು.

ತರಬೇತಿ ನೀಡುವ ಸ್ಥಳಗಳು:

ತರಬೇತಿಯನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಾತ್ರ ನೀಡಲಾಗುವುದು. ಅಭ್ಯರ್ಥಿಗಳು ಸದರಿ ಮೂರು ಜಿಲ್ಲೆಗಳಲ್ಲಿ ತರಬೇತಿಗೆ ಆಯ್ಕೆ ಮಾಡಿಕೊಳ್ಳುವ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೊಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್-ಸೈಟ್ https://bcwd. karnataka.gov.in ಗೆ ಭೇಟಿ ನೀಡಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!