ಬಿಡಿಎ ಬೃಹತ್ ಕಾರ್ಯಾಚರಣೆ: 35 ಕೋಟಿ ರೂ.ಮೌಲ್ಯದ ಆಸ್ತಿ ವಶ‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಗುರುವಾರ ನಗರದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬನಶಂಕರಿ 2ನೇ ಹಂತದ ಕತ್ರಿಗುಪ್ಪೆಯಲ್ಲಿ 35 ಕೋಟಿ ರೂಪಾಯಿ ಮೌಲ್ಯದ ಸಾರ್ವಜನಿಕ ಬಳಕೆಗೆ ಮೀಸಲಿರಿಸಿದ ಜಾಗವನ್ನು (ಸಿಎ) ವಶಪಡಿಸಿಕೊಂಡಿದೆ.

ದಕ್ಷಿಣ ತಾಲ್ಲೂಕಿನ ಉತ್ತರಹಳ್ಳಿ ಹೋಬಳಿಯ ಕತ್ರಿಗುಪ್ಪೆ ಗ್ರಾಮದ (ಬನಶಂಕರಿ 2ನೇ ಹಂತ) ಸರ್ವೆ ನಂ. 15/1ರಲ್ಲಿನ 19 ಗುಂಟೆ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್‌ಗಳು, ಗ್ಯಾರೇಜ್, ಗುಜರಿ ಅಂಗಡಿ, ದೇವಸ್ಥಾನವನ್ನು ಜೆಸಿಬಿ ಬಳಸಿ ತೆರವು ಮಾಡಿದರು.

ಬೆಳಿಗ್ಗೆ 9 ಗಂಟೆಗೆ ಕಾರ್ಯಾಚರಣೆ ಆರಂಭಿಸಲಾಗಿತ್ತು. ಶೆಟ್ ನಲ್ಲಿ ತಾತ್ಕಾಲಿಕ ಮುನೇಶ್ವರ ದೇವಾಲಯ ನಿರ್ಮಿಸಲಾಕಿತ್ತು. ಇದನ್ನು ಕೆಡವಲು ಮುಂದಾದಾಗ ಸ್ಥಳೀಯರು ವಿರೋಧ ವ್ಯಕ್ತಪಡಿಸಿತ್ತು. ಬಳಿಕ ವಿಗ್ರಹವನ್ನು ನಾವು ಮುಟ್ಟುವುದಿಲ್ಲ. ಸ್ಥಳೀಯರು ಅದನ್ನು ಸ್ಥಳಾಂತರಿಸಬಹುದು ಎಂದು ಹೇಳಿದ್ದೆವು. ಬಳಿಕ ದೇವಾಲಯದ ರಚನೆಯನ್ನು ಮಾತ್ರ ಕೆಡವಲಾಯಿತು. ಇದಲ್ಲದೆ. ಶೆಡ್ ನಲ್ಲಿದ್ದ ಗುಜರಿಗೆ ಸೇರಿದ ಒಟ್ಟು 23 ವಾಹನಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಯಿತು ಎಂದು ದಕ್ಷಿಣ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಕೃಷ್ಣ ಕುಮಾರ್ ಅವರು ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!