ಬಿಡಿಎ ಎಕ್ಸಿಕ್ಯುಟಿವ್‌ ಇಂಜಿನಿಯರ್‌ಗೆ ಧಮ್ಕಿ; ಇಬ್ಬರು ಪತ್ರಕರ್ತರ ವಿರುದ್ಧ ಎಫ್ಐಆರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸುಲಿಗೆ ಹಾಗೂ ಬೆದರಿಕೆ ಆರೋಪದ ಮೇಲೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಕನ್ನಡ ಮಾಸಿಕ ಪತ್ರಿಕೆಯ ಇಬ್ಬರು ಪತ್ರಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಾಡಪ್ರಭು ಕೆಂಪೇಗೌಡ ಲೇಔಟ್ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಸಿ ಎನ್ ಅಶೋಕ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಕನ್ನಡ ಮಾಸಿಕ ಪತ್ರಿಕೆಯಲ್ಲಿ ಪತ್ರಕರ್ತರಾಗಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡ ಶರತ್ ಬಾಬು ಮತ್ತು ಗುರುಮೂರ್ತಿ ಎಂಬುವರು, ನಾನು ಮತ್ತು ನನ್ನ ಅಧೀನದಲ್ಲಿ ಕೆಲಸ ಮಾಡುತ್ತಿರುವ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ಗಳಾದ ಅಶೋಕ್ ಭಾಗಿ, ವರುಣ್, ಪರಶುರಾಮ್ ಬಿ ಎಚ್ ಮತ್ತು ಜಯದೀಪ್ ಎಚ್ ಪಿ ಅವರು ಲಂಚ ಸ್ವೀಕರಿಸಿ, ಕಳಪೆ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ ಎಂದು ಅಶೋಕ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ನವೆಂಬರ್ 2024 ರಲ್ಲಿ ಅಶೋಕ್ ಅವರಿಂದ 27 ಲಕ್ಷ ರು ಹಣಕ್ಕೆ ಇಬ್ಬರು ಬೇಡಿಕೆ ಇಟ್ಟಿದ್ದಾರೆ, ಒಂದು ವೇಳೆ ಹಣ ನೀಡಲು ವಿಫಲವಾದರೆ ಲೋಕಾಯುಕ್ತಕ್ಕೆ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದಾರೆ. ನಂತರ ಇಬ್ಬರು ತಮ್ಮ ಕಚೇರಿಗೆ ಭೇಟಿ ನೀಡಿ, ಹಣ ಕೊಡಲು ಸಾಧ್ಯವಾಗದಿದ್ದರೇ ಪರ್ಯಾಯ ಆಯ್ಕೆಯಾಗಿ ರಾಮನಗರದಲ್ಲಿ ಶೆಡ್ ನಿರ್ಮಿಸುವಂತೆ ಒತ್ತಾಯಿಸಿದ್ದರು ಎಂದು ಅಶೋಕ್ ದೂರಿನಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!