Friday, December 12, 2025

ಚುರುಕಾಯ್ತು ಬಿಡಿಎ ಕಾರ್ಯಾಚರಣೆ: ಸುಮಾರು 140 ಕೋಟಿ ರೂ. ಆಸ್ತಿ ವಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದುವರೆಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಗುರುವಾರ (ಡಿ.11) ನಡೆದ ಕಾರ್ಯಾಚರಣೆಯಲ್ಲಿ ನಾಗರಬಾವಿ ಬಡಾವಣೆಯಲ್ಲಿ 140 ಕೋಟಿ ರೂ. ಆಸ್ತಿಯನ್ನು ವಶಪಡಿಸಿಕೊಂಡಿದೆ.

ಬೆಂಗಳೂರು ಉತ್ತರ ತಾಲ್ಲೂಕು, ಯಶವಂತಪುರ ಹೋಬಳಿ, ನಾಗರಬಾವಿ ಗ್ರಾಮದ ಸರ್ವೆ ನಂ. 17ರಲ್ಲಿ 2 ಎಕರೆ 30 ಗುಂಟೆ ಪ್ರದೇಶಗಳಲ್ಲಿ ಅನಧಿಕೃವಾಗಿ ನಿರ್ಮಾಣಗಳನ್ನು ತೆರವುಗೊಳಿಸಿ, ಸುಮಾರು 140 ಕೋಟಿ ರೂ. ಬೆಲೆಬಾಳುವ ಪ್ರದೇಶವನ್ನು ಪ್ರಾಧಿಕಾರವು ವಶಪಡಿಸಿಕೊಂಡಿದೆ.

ಈ ಕಾರ್ಯಾಚರಣೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕರು, ಅಭಿಯಂತರ ಅಧಿಕಾರಿ-1, ಪಶ್ಚಿಮ ವಿಭಾಗದ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಇವರುಗಳನ್ನು ಒಳಗೊಂಡಂತೆ ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ನೆರವೇರಿಸಲಾಯಿತು.

error: Content is protected !!