ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಬೆರಳಚ್ಚುಗಾರ ಮತ್ತು ಶೀಘ್ರಲಿಪಿಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಪಿಯುಸಿ ವಿದ್ಯಾರ್ಹತೆ ಜೊತೆಗೆ ಡಿಸೆಂಬರ್ 8,2023ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಬೆರಳಚ್ಚುಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 21,400/- ರಿಂದ 42,000/-ರೂ ಮತ್ತು ಶೀಘ್ರಲಿಪಿಗಾರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 27,650/- ರಿಂದ 52,650/-ರೂ ವೇತನವನ್ನು ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಡಿಸೆಂಬರ್ 8,2023ರೊಳಗೆ ಅರ್ಜಿಯನ್ನು ಸಲ್ಲಿಸಲು ಹಾಕಬಹುದು.