ಸಂದೇಹಾಸ್ಪದ ಚಟುವಟಿಕೆ ಬಗ್ಗೆ ಜಾಗೃತರಾಗಿರಿ: ಜನತೆಗೆ ಪೇಜಾವರಶ್ರೀ ಕಿವಿಮಾತು

ಹೊಸದಿಗಂತ ಡಿಜಿಟಲ್ ಡೆಸ್ಕ್:
ಇತ್ತೀಚಿನ ದಿನಗಳಲ್ಲಿ ಕರಾವಳಿ ಭಾಗದಲ್ಲಿ ಆತಂಕಕಾರಿ ಬೆಳವಣಿಗೆಗಳು ಹೆಚ್ಚಳವಾಗುತ್ತಿದ್ದು, ಜನತೆ ಸದಾ ಕಾಲ ಜಾಗೃತರಾಗಿರಬೇಕು ಎಂದು ಪೇಜಾವರ ಶ್ರೀ ವಿಶ್ಚಪ್ರಸನ್ನ ತೀರ್ಥ ಸ್ವಾಮೀಜಿ ಕಿವಿಮಾತು ಹೇಳಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿಯಲ್ಲಿ ವ್ಯಾಪಿಸಿರುವ ಉಗ್ರ ಕೃತ್ಯಗಳು ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದಿಂದ ಬಯಲಾಗಿದೆ. ಹಿಂದೂ ಸಂಕೇತ ಬಳಸಿ ಉಗ್ರ ಕೃತ್ಯ ಮಾಡುವುದು ನೋಡುತ್ತಿದ್ದೇವೆ. ಸಮಾಜದಲ್ಲಿ ದುಷ್ಕೃತ್ಯ ಎಸಗುವವರು ಹಿಂದೂ ಸಮಾಜದ ಮೇಲೆ ಹೇರುವ ನಿಟ್ಟಿನಲ್ಲಿ ಈ ಚಟುವಟಿಕೆ ನಡೆಸುತ್ತಿದ್ದಾರೆ. ಹೀಗಾಗಿ ಪ್ರತಿಯೊಬ್ಬರೂ ಮೊಬೈಲ್ ಸಹಿತ ಯಾವುದೇ ದಾಖಲೆ ಕಳೆದುಹೋದರೆ ತಕ್ಷಣ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿ. ಇಲ್ಲವಾದರೆ ಇಂತಹ ಸಂದರ್ಭದಲ್ಲಿ ಸಂದೇಹಕ್ಕೆ ಒಳಗಾಗುವ ಅಪಾಯವಿದೆ ಎಂದು ಅವರು ಹೇಳಿದರು.
ಕರಾವಳಿಯಲ್ಲಿ ಉತ್ಥಾನ ದ್ವಾದಶಿ ಬಳಿಕ ಯಕ್ಷಗಾನ, ಕೋಲ, ಉತ್ಸವ, ಕಂಬಳ, ದೀಪೋತ್ಸವ, ನಾಗಮಂಡಲದಂತಹ ಹಲವಾರು ಉತ್ಸವ ನಡೆಯುತ್ತದೆ.  ಈ ಸಂದರ್ಭಗಳಲ್ಲಿ  ಜನಸಂದಣಿ ಹೆಚ್ಚಿರುತ್ತದೆ. ಇಲ್ಲಿ ಅನಾಹುತ ನಡೆದಲ್ಲಿ ಸಮಾಜಕ್ಕೆ ದೊಡ್ಡ ಹಾನಿ. ಹಾಗಾಗಿ ಪ್ರತಿಯೊಬ್ಬರೂ ಈ ಬಗ್ಗೆ ಸದಾ ಜಾಗೃತರಾಗಿಬೇಕು ಎಂದು ಶ್ರೀಗಳು ಎಚ್ಚರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!