ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಹೆದ್ದಾರಿಗಳಲ್ಲಿ ರ್‍ಯಾಶ್ ಡ್ರೈವಿಂಗ್ ಮಾಡುವವರಿಗೆ ಬಿಸಿ ಮುಟ್ಟಿಸಲು ಬೆಂಗಳೂರು ಸಂಚಾರ ಪೊಲೀಸರು ಮುಂದಾಗಿದ್ದಾರೆ.
ಇನ್ಮುಂದೆ ಹೆದ್ದಾರಿಗಳಲ್ಲಿ ರ್‍ಯಾಶ್ ಡ್ರೈವಿಂಗ್ ಮಾಡಿದವರ ವಿರುದ್ಧ FIR ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಲು ಸಂಚಾರ ಪೊಲೀಸರು ಮುಂದಾಗಿದ್ದಾರೆ. ಹೈವೇ ಅಂತಾ ಓವರ್ ಸ್ಪೀಡ್ನಲ್ಲಿ ಹೋದ್ರೆ FIR ದಾಖಲಾಗೋದು ಪಕ್ಕಾ.
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರ್‍ಯಾಶ್ ಡ್ರೈವಿಂಗ್ ದಿನೇ ದಿನೇ ಹೆಚ್ಚಾಗುತ್ತಿದೆ. 130 ಕಿ.ಮೀ.ಗೂ ಅಧಿಕ ಸ್ಪೀಡ್ ನಲ್ಲಿ ವಾಹನ ಸವಾರರು ವಾಹನ ಚಲಾಯಿಸುತ್ತಿದ್ದಾರೆ. ಹೀಗಾಗಿ ಅತಿ ವೇಗವಾಗಿ ವಾಹನ ಚಲಾಯಿಸುವವರ ವಿರುದ್ಧ ಕೇಸ್ ದಾಖಲು ಮಾಡಲು ಸಂಚಾರಿ ಪೊಲೀಸರು ಮುಂದಾಗಿದ್ದಾರೆ. ಓವರ್ ಸ್ಪೀಡ್ ಗೆ ಬ್ರೇಕ್ ಹಾಕಲು ಎಡಿಜಿಪಿ ಅಲೋಕ್ ಕುಮಾರ್ ಹೊಸ ಅಸ್ತ್ರ ಪ್ರಯೋಗ ಮಾಡಿದ್ದಾರೆ.
ಅತಿ ವೇಗದ ಚಾಲನೆಯಿಂದ 90%ರಷ್ಟು ಅಪಘಾತ ಸಾಧ್ಯತೆ ಇರುತ್ತೆ. ಪರಿಶೀಲನೆ ವೇಳೆ ಒಂದೇ ದಿನ 150ಕ್ಕೂ ಹೆಚ್ಚು ಅತಿ ವೇಗ ಚಾಲನೆ ಕೇಸ್ಗಳು ದಾಖಲಾಗುತ್ತಿವೆ. ಹೀಗಾಗಿ ನಿನ್ನೆ ಮೈಸೂರು ಬೆಂಗಳೂರು ಹೈವೇ ಸಿಸಿಟಿವಿ ಪರಿಶೀಲನೆ ಮಾಡಿದ ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ ಕುಮಾರ್ ಅವರು ಆಗಸ್ಟ್ 1 ರಿಂದ ಅತಿ ವೇಗವಾಗಿ ವಾಹನ ಚಾಲನೆ ಮಾಡುವವರ ವಿರುದ್ದ ಎಫ್ಐಆರ್ ದಾಖಲಿಸಲು ಸೂಚನೆ ನೀಡಿದ್ದಾರೆ. ಸ್ಪೀಡ್ನಲ್ಲಿ 130 ಕಿ.ಮೀ ವೇಗ ಮಿತಿ ದಾಟಿದ್ರೆ ಎಫ್ಐಆರ್ ದಾಖಲಿಸಲು ಸೂಚನೆ ನೀಡಿದ್ದಾರೆ.