ಪ್ರತಿಭಟನೆ ಸಮಯ ಎಚ್ಚರಿಕೆಯಿಂದಿರಿ: ಕಾಂಗ್ರೆಸ್ ಕಾರ್ಯಕರ್ತರಿಗೆ CM ಸಿದ್ದರಾಮಯ್ಯ ಸಲಹೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ವೇಳೆ ಎಚ್ಚರಿಕೆಯಿಂದಿರಿ ಎಂದು ಕೈ ಕಾರ್ಯಕರ್ತರಿಗೆ ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರ ಕಾನೂನು ಬಾಹಿರ ನಿರ್ಣಯ ಖಂಡಿಸಿ ಬಾಗಲಕೋಟೆಯಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸುವ ವೇಳೆ ದ್ಯಾಮಪ್ಪ ಎಂಬ ನನ್ನ ಅಭಿಮಾನಿಯೊಬ್ಬರು ಗಾಯಗೊಂಡ ವಿಚಾರ ಈಗಷ್ಟೆ ತಿಳಿಯಿತು.ದೇಶದ ಸಂವಿಧಾನ, ಪ್ರಜಾಪ್ರಭುತ್ವದ ಉಳಿವಿಗಾಗಿ ನನ್ನ ಮತ್ತು ನಮ್ಮ ಪಕ್ಷದ ಪರವಾಗಿ ಇಂದು ಹೋರಾಟ ನಡೆಸುತ್ತಿರುವ ನನ್ನೆಲ್ಲ ಆತ್ಮೀಯ ಬಂಧುಗಳು ಪ್ರತಿಭಟನೆಯ ವೇಳೆ ದಯವಿಟ್ಟು ಎಚ್ಚರಿಕೆಯಿಂದಿರಿ. ನಿಮ್ಮ ಕಾಳಜಿ, ಆಕ್ರೋಶವನ್ನು ನಾನು ಅರ್ಥೈಸಿಕೊಳ್ಳಬಲ್ಲೆ ಆದರೆ ನನಗೆ ನಿಮ್ಮೆಲ್ಲರ ಆರೋಗ್ಯ, ಜೀವವೂ ಮುಖ್ಯ. ನಿಮ್ಮ ಪ್ರೀತಿಗೆ ನಾನು ಸದಾ ಋಣಿ ಎಂದು ಸಲಹೆ ನೀಡಿದ್ದಾರೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!