ಹೊಸದಿಗಂತ ಡಿಜಿಟಲ್ ಡೆಸ್ಕ್:
ಆನ್ ಲೈನ್ ನಲ್ಲಿ ಪಾಕಿಸ್ತಾನದ ಸರಕುಗಳನ್ನು ಮಾರಾಟ ಮಾಡುವುದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಅಮೇಜಾನ್, ಫ್ಲಿಪ್‌ಕಾರ್ಟ್, ಯು ಬೈ ಇಂಡಿಯಾ, Etsy, ದಿ ಫ್ಲ್ಯಾಗ್ ಕಂಪನಿ ಮತ್ತು ಕಾರ್ಪೊರೇಷನ್‌ಗಳಿಗೆ ಸರಕು ಮಾರಾಟ ಮಾಡದಂತೆ ನೋಟಿಸ್ ಜಾರಿ ಮಾಡಲಾಗಿದೆ. ಆದರೂ ಆದೇಶ ಉಲ್ಲಂಘಿಸುತ್ತಿರುವುದು ಗೊತ್ತಾಗಿದ್ದು, ದೇಶದ ಹಿತದೃಷ್ಟಿಯಿಂದ ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳು ಪಾಕಿಸ್ತಾನ ಸಂಬಂಧಿತ ಎಲ್ಲಾ ವಸ್ತುಗಳನ್ನು ತಕ್ಷಣವೇ ತೆಗೆದುಹಾಕಬೇಕು ಮತ್ತು ರಾಷ್ಟ್ರೀಯ ಕಾನೂನನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಸಚಿವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.