ಹೊಸದಿಗಂತ ಡಿಜಿಟಲ್ ಡೆಸ್ಕ್:
ನನ್ನನ್ನ ಮುಟ್ಟಿದರೆ ಹುಷಾರ್ ಎಂದು ಬಹಿರಂಗವಾಗಿಯೇ ಹೇಳಿರುವ ಸಿಎಂ ಸಿದ್ದರಾಮಯ್ಯ ಬಲಪ್ರದರ್ಶನಕ್ಕೆ ಸಿದ್ಧತೆ ನಡೆಸಿದ್ದಾರೆ.
ಡಿಸೆಂಬರ್ 5 ರಂದು ಹಾಸನದಲ್ಲಿ ಅಹಿಂದ ಸಮಾವೇಶ ನಡೆಸಲು ಮುಂದಾಗಿದ್ದಾರೆ.
ಮೈಸೂರು, ಚಾಮರಾಜನಗರ, ಕೊಡಗು, ಮಂಡ್ಯ, ಹಾಸನ ಸೇರಿದಂತೆ ಐದು ಜಿಲ್ಲೆಗಳಲ್ಲಿ ಅಹಿಂದ ಸಮಾವೇಶ ನಡೆಸಲು ಸಿದ್ದರಾಮಯ್ಯ ತಂಡ ಪ್ಲಾನ್ ಮಾಡಿದೆ.
ಸಿದ್ದರಾಮಯ್ಯ ಅವರೇ ಖುದ್ದು ಸಚಿವರಿಗೆ ಕರೆ ಮಾಡಿ ತಮ್ಮ ಶಕ್ತಿ ಪ್ರದರ್ಶನ ಮಾಡಬೇಕಿದೆ ಎಂದು ಹೇಳುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಸಮಾವೇಶ ಮಾಡಲೇಬೇಕು ಸಿದ್ದತೆ ಮಾಡಿಕೊಳ್ಳಿ. ಹೈಕಮಾಂಡ್ ಜೊತೆ ನಾನು ಮಾತನಾಡುತ್ತೇನೆ ಎಂದು ಸಿದ್ದರಾಮಯ್ಯ ಸಚಿವರಿಗೆ ಸೂಚನೆ ನೀಡಿದ್ದಾರೆ.