March 13, 2026
Friday, March 13, 2026
spot_img

ಠಾಣೆಗೆ ಬರುವ ಮಹಿಳೆಯರೊಂದಿಗೆ ತಾಳ್ಮೆ, ಗೌರವಯುತವಾಗಿ ವರ್ತಿಸಿ: ಪೊಲೀಸ್ ಇಲಾಖೆಗೆ ನಾಗಲಕ್ಷ್ಮಿ ಚೌಧರಿ ಸ್ಪಷ್ಟ ಸೂಚನೆ


ಹೊಸದಿಗಂತ ಡಿಜಿಟಲ್ ಡೆಸ್ಕ್:

ಪೊಲೀಸ್ ಠಾಣೆಗೆ ಮಹಿಳೆಯರು ದೂರು ದಾಖಲಿಸಲು ಅಥವಾ ಯಾವುದೇ ಮಾಹಿತಿ ಪಡೆಯಲು ಬಂದಾಗ ಅಧಿಕಾರಿಗಳು ಅವರೊಂದಿಗೆ ಗೌರವಯುತವಾಗಿ ವರ್ತಿಸಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.


ಮೈಸೂರಿನಲ್ಲಿಂದು ನಡೆದ ಜನಸಂಪರ್ಕ (ಜನ ಸುನ್ವಾಯಿ) ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಹಿಳೆಯರಿಗೆ ಯಾವುದೇ ರೀತಿಯ ತೊಂದರೆ ಉಂಟಾದರೂ ಅವರು ನಿರ್ಭಯವಾಗಿ ಪೊಲೀಸ್ ಠಾಣೆಗೆ ಆಗಮಿಸಿ ದೂರು ಸಲ್ಲಿಸುವಂತಹ ವಾತಾವರಣ ನಿರ್ಮಾಣವಾಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ದೂರು ನೀಡಲು ಬರುವ ಮಹಿಳೆಯರ ಅಹವಾಲುಗಳನ್ನು ತಾಳ್ಮೆಯಿಂದ ಆಲಿಸಿ, ಅವರಿಗೆ ಸೂಕ್ತ ಕಾನೂನು ನೆರವು ನೀಡಲು ಅಧಿಕಾರಿಗಳು ಮುಂದಾಗಬೇಕು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !