ಹೊಸದಿಗಂತ ಡಿಜಿಟಲ್ ಡೆಸ್ಕ್:
ರಥಸಪ್ತಮಿಯ ನಂತರ ಬಿಸಿಲು ಹೆಚ್ಚಾಗಿ ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಕಾರಣ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಅರಣ್ಯಾಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.
ವೀಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲ ಅರಣ್ಯ ಮತ್ತು ವನ್ಯಜೀವಿ ವಿಭಾಗದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕಾಡಿನ ಬೆಂಕಿಗೆ ಅರಣ್ಯ ಸಂಪತ್ತು ನಾಶವಾಗದ ರೀತಿಯಲ್ಲಿ ಕಟ್ಟೆಚ್ಚರ ವಹಿಸಬೇಕು. ಡ್ರೋನ್ ಸೌಲಭ್ಯ ಇರುವ ಕಡೆ ಕ್ಯಾಮೆರಾ ಮೂಲಕ ನಿಗಾ ಇಡಬೇಕು. ಗಸ್ತು ಹೆಚ್ಚಿಸಿ, ಸೂಕ್ಷ್ಮ ಪ್ರದೇಶಗಳಲ್ಲಿ ಸಿಬ್ಬಂದಿ ಎಚ್ಚರದಿಂದ ಇರಬೇಕು ಎಂದು ತಿಳಿಸಿದರು.
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ಕಾಡಿನಲ್ಲಿ ಮೇವು ಮತ್ತು ಕುಡಿಯುವ ನೀರಿನ ಕೊರತೆ ಆಗದಂತೆಯೂ ಎಚ್ಚರ ವಹಿಸಲು, ಜಲಗುಂಡಿಗಳಿಗೆ ಸೌರ ಪಂಪ್‌ಗಳ ಮೂಲಕ ಕೊಳವೆ ಬಾವಿಯಿಂದ ನೀರು ಹರಿಸಲೂ ಸೂಚಿಸಿದರು.


