Sunday, August 14, 2022

Latest Posts

ಕೊಡಗಿನಲ್ಲಿ ಕರಡಿ ದಾಳಿ: ಮಹಿಳೆಗೆ ಗಾಯ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಮಡಿಕೇರಿ:

ಹುಲಿ, ಕಾಡಾನೆ, ಕಾಡು ಹಂದಿ ದಾಳಿಯಿಂದ ಬೇಸತ್ತಿರುವ ಕೊಡಗಿನ ಜನ ಈಗ ಕರಡಿಯ ದಾಳಿಯನ್ನು ಕೂಡ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಕರಡಿಯೊಂದು ದಾಳಿ ಮಾಡಿದ ಪರಿಣಾಮ ಮಹಿಳೆಯೊಬ್ಬರು ಗಾಯಗೊಂಡಿರುವ ಘಟನೆ ನಿಟ್ಟೂರು ಗ್ರಾ.ಪಂ ವ್ಯಾಪ್ತಿಯ ಕಾರ್ಮಾಡು ದಾಳಿಂಬೆ ಹಾಡಿಯ ಅಂಗನವಾಡಿ ಬಳಿ ನಡೆದಿದೆ.
ಶನಿವಾರ ಬೆಳಗ್ಗೆ ಕೂಲಿ ಕೆಲಸಕ್ಕೆ ತೆರಳುತ್ತಿದ್ದ ಗಿರಿಜನರ ಪದ್ಮಾ ಎಂಬವರ ಮೇಲೆ ಕರಡಿ ದಾಳಿ ಮಾಡಿದ್ದು, ಕಾಲಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಬಾಳೆಲೆ ಪ್ರಾಥಮಿಕ ಆರೋಗ್ಯ ಉಪ ಕೇಂದ್ರದ ಸಿಬ್ಬಂದಿಗಳು ಸ್ಥಳಕ್ಕೆ ಬಂದು ಚಿಕಿತ್ಸೆ ನೀಡಿದರು.
ನಿಟ್ಟೂರು ಗ್ರಾ.ಪಂ ಸದಸ್ಯರಾದ ಕಾಟಿಮಾಡ ಶರೀನ್ ಮುತ್ತಣ್ಣ ಮಾಹಿತಿ ನೀಡಿದ ಮೇರೆಗೆ ಅರಣ್ಯಾಧಿಕಾರಿ ಯೋಗೇಶ್ ಸ್ಥಳಕ್ಕೆ ಭೇಟಿ ನೀಡಿ ಕರಡಿಯನ್ನು ಕಾಡಿಗಟ್ಟುವ ಭರವಸೆ ನೀಡಿದ ಅವರು ಚಿಕಿತ್ಸಾ ವೆಚ್ಚ ಭರಿಸಲು ಶಿಫಾರಸ್ಸು ಮಾಡುವುದಾಗಿ ತಿಳಿಸಿದರು.
ಕಳೆದ ಕೆಲವು ದಿನಗಳಿಂದ ದಾಳಿಂಬೆ ಹಾಡಿಯ ಸುತ್ತಮುತ್ತಲ ತೋಟಗಳಲ್ಲಿ ಸಂಚರಿಸುತ್ತಿರುವ ಕರಡಿ ಗ್ರಾಮದಲ್ಲಿ ಆತಂಕ ಸೃಷ್ಟಿಸಿದೆ. ತಕ್ಷಣ ಕರಡಿಯನ್ನು ಸ್ಥಳಾಂತರಗೊಳಿಸಬೇಕೆಂದು ಪಂಚಾಯಿತಿ ಉಪಾಧ್ಯಕ್ಷರಾದ ಪಡಿಞಾರಂಡ ಕವಿತಾ ಪ್ರಭು, ಸದಸ್ಯರಾದ ಅಮ್ಮುಣಿ, ಕಾಟಿಮಾಡ ಶರೀನ್ ಮುತ್ತಣ್ಣ ಒತ್ತಾಯಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss