ಹೊಸದಿಗಂತ ಡಿಜಿಟಲ್ ಡೆಸ್ಕ್:
ಎರಡು ಬಾರಿ ಪೆಟ್ಟು ತಿಂದಿದ್ದೇನೆ. ಈ ಬಾರಿ ನಿಮ್ಮ ಮೇಲೆ ನಂಬಿಕೆ ಇಟ್ಟು ಚುನಾವಣೆಗೆ ಅರ್ಜಿ ಸಲ್ಲಿಸಿದ್ದೇನೆ. ಚನ್ನಪಟ್ಟಣ ಜನತೆ ನನ್ನ ಕೈ ಬಿಡಬೇಡಿ ಎಂದು ಚನ್ನಪಟ್ಟಣ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಚಕ್ಕೆರೆ ಗ್ರಾಮದಲ್ಲಿ ಪ್ರಚಾರ ನಡೆಸಿ ಮಾತನಾಡಿದ ಅವರು, ಚಕ್ಕೆರೆ ಗ್ರಾಮದಲ್ಲಿ ಜೆಡಿಎಸ್ ಎಂದು ಗುರುತಿಸಿಕೊಂಡವರು ಕಾಂಗ್ರೆಸ್ ಗೆ ಹೋಗಿದ್ದಾರೆ. ಆದರೆ ಚಕ್ಕೆರೆಯಲ್ಲಿ ಹಲವರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ನಿಖಿಲ್ ಚುನಾವಣೆಗೆ ನಿಲ್ಲಬೇಕು ಎಂದು ಕ್ಷೇತ್ರದ ಜನರು ಮನವಿ ಮಾಡಿದ್ದರು. ಈ ಚುನಾವಣೆ ನನ್ನ ಪಾಲಿಗೆ ಅನಿರೀಕ್ಷಿತ ಬೆಳವಣಿಗೆ. ಸಿಎಂ, ಡಿಸಿಎಂ, ಎಲ್ಲಾ ಒಬ್ಬ ನಿಖಿಲ್ ಸೋಲಿಸೋಕೆ ಬಂದಿದ್ದಾರೆ. ಈ ಬಾರಿ ಜನರು ತಮ್ಮ ಮನಸಿನಲ್ಲಿ ನನಗೆ ಜಾಗ ಕೊಡುತ್ತಾರೆ ಎಂದು ಭಾವಿಸಿದ್ದೇನೆ ಎಂದು ಭಾವುಕ ಮಾತುಗಳನ್ನಾಡಿದ್ದಾರೆ.