ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಹುಬ್ಬಳ್ಳಿ:
ಪ್ರಣಾಳಿಕೆಯಲ್ಲಿ ನೀಡಿದ ಆಶ್ವಾಸನೆಯಂತೆ ಹುಬ್ಬಳ್ಳಿ-ಧಾರವಾಡ ಮಹಾನಗರವನ್ನು ಸುಂದರ ಮತ್ತು ಮಾದರಿ ನಗರವನ್ನಾಗಿ ಮಾಡಲು ಬಿಜೆಪಿ ಬದ್ಧವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು.
ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದೇಶಿಸಿ ಮಾತನಾಡಿದ ಅವರು, ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಬಹುಮತದಿಂದ ಗೆಲ್ಲುತ್ತದೆ. ಪಕ್ಷದ ಸಿದ್ಧಾಂತ, ವಾರ್ಡ್ಗಳಲ್ಲಿ ಜನರೊಂದಿಗೆ ಅಭ್ಯರ್ಥಿಗಳಿಗೆ ಇರುವ ಸಂಪರ್ಕ ಈ ಮುಂತಾದ ವಿಚಾರಗಳನ್ನು ಮಾನದಂಡವಾಗಿಟ್ಟುಕೊಂಡು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಪಕ್ಷ ಬೆಳೆಯುತ್ತಿರುವುದರಿಂದ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗುವುದು ಸಹಜ. ಕೆಲವರು ಪಕ್ಷ ವಿರೋಧಿ ಕೆಲಸ ಮಾಡಿದ್ದಾರೆ. ಅಂಥವರನ್ನು ಪಕ್ಷ ಈಗಾಗಲೇ ಉಚ್ಛಾಟನೆ ಮಾಡಿದೆ ಎಂದು ಹೇಳಿದರು.
ಅಭ್ಯರ್ಥಿಗಳ ಪರವಾಗಿ ಪಕ್ಷದ ನಾಯಕರು, ಹಿರಿಯರು ಮತ್ತು ಕಾರ್ಯಕರ್ತರು ಬಹಳ ಉತ್ಸಾಹದಿಂದ ವಾರ್ಡ್ಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಜನರಿಂದಲೂ ಉತ್ತಮ ಪ್ರತಿಕ್ರಿಯೆ ಬರುತ್ತಿದ್ದು, ಮೂರನೇ ಬಾರಿ ಪಕ್ಷ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಳೆದ 10 ವರ್ಷದಿಂದ ಕಾಮಗಾರಿ ಪ್ರಗತಿಯಲ್ಲಿವೆ. ಮಹಾನಗರ ಅಭಿವೃದ್ಧಿಯಾಗಬೇಕಾದರೆ ಒಂದೆಡರು ವರ್ಷ ಸಾಲದು ಕೆಲವು ವರ್ಷ ಬೇಕು. ಮುಂದಿನ ಐದು ವರ್ಷಗಳಲ್ಲಿ ಸಂಪೂರ್ಣವಾಗುತ್ತದೆ ಎಂದರು.
ಮೂರು ಮಹಾನಗರಗಳ ಚುನಾವಣೆ ಮಾಡಿ ಬಂದಿದ್ದೇನೆ. ಕಲಬುರಗಿಯಲ್ಲಿ ಇವತ್ತಿನ ವರೆಗೆ ಬಿಜೆಪಿ ಅಧಿಕಾರಕ್ಕೆ ಬಂದಿಲ್ಲ. ಈ ಬಾರಿ ಅಲ್ಲಿಯ ವಾತಾವರಣ ಕಂಡರೆ ಅಲ್ಲಿ ಬಿಜೆಪಿ ಗೆಲುವು ಖಚಿತ. ಬೆಳೆಗಾವಿಯಲ್ಲಿ ಕಳೆದ 25 ವರ್ಷದಿಂದ ಮಹಾನಗರ ಪಾಲಿಕೆಯಲ್ಲಿ ಸ್ಥಳೀಯ ಪಕ್ಷ ಆಡಳಿತ ನಡೆಸಿದೆ. ಆದರೆ ಬಿಜೆಪಿ ಚಿಹ್ನೆಯಡಿಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ. ಈ ಬಾರಿ ಸ್ಪರ್ಧಿಸಿದೆ, ಅಲ್ಲಿ ಗೆಲ್ಲತೇವೆ. ಹುಬ್ಬಳ್ಳಿ-ಧಾರವಾಡದಲ್ಲಿ ನಮ್ಮ ನಾಯಕರಾದ ಜೋಶಿ ಮತ್ತು ಶೆಟ್ಟರ್ ಮಾಡಿದ ಅಭಿವೃದ್ಧಿ ಕಾರ್ಯಗಳಿಂದ ಗೆಲ್ಲುವು ನಮ್ಮದೆ ಎಂದು ಹೇಳಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದತ್ತಮೂರ್ತಿ ಕುಲಕರ್ಣಿ, ಜಿಲ್ಲಾ ಪ್ರಭಾರಿ ಸುಧಾ ಜಯಾ ರುದ್ರೇಶ, ಪ್ರಶಾಂತ ಮತ್ತು ವಕ್ತಾರ ರವಿ ನಾಯಕ ಇದ್ದರು.