ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಚಾಮರಾಜನಗರದ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ ಒಟ್ಟಾರೆ 22 ಮಂದಿ ಮೃತಪಟ್ಟಿದ್ದಾರೆ.
ಭಾನುವಾರ ರಾತ್ರಿ 10:30ರಿಂದಲೇ ಆಕ್ಸಿಜನ್ ಕೊರತೆಯಾಗಿದ್ದು, 12 ರೋಗಿಗಳು ಮೃತಪಟ್ಟಿದ್ದಾರೆ. ಇತರ ಕಾರಣಗಳಿಂದಾಗಿ 10 ರೋಗಿಗಳು ಮೃತಪಟ್ಟಿದ್ದಾರೆ.
ಮೈಸೂರಿನಿಂದ ಎರಡು ದಿನಗಳ ಹಿಂದಿನವರೆಗೂ ಆಮ್ಲಜನಕ ಪೂರೈಕೆ ಆಗುತ್ತಿತ್ತು ಆದರೆ ಮೈಸೂರು ಹೊರತುಪಡಿಸಿ ಬೇರೆಲ್ಲಿಗೂ ಆಮ್ಲಜನಕ ಪೂರೈಕೆ ಆಗಬಾರದು ಎಂದು ಗ್ಯಾಸ್ ಏಜೆನ್ಸಿ ಆದೇಶಿಸಿದ ಕಾರಣ ಸಿಲಿಂಡರ್ಗಳು ಬೇರೆಲ್ಲೂ ದೊರಕಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.