ಸಿಎಂ ಆಯಿತು ಈಗ ಸಚಿವ ಸಂಪುಟ ರಚನೆಯ ಕಸರತ್ತು: ಸೋನಿಯಾ ಗಾಂಧಿ ನಿವಾಸದಲ್ಲಿ ಮಹತ್ವದ ಸಭೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ ಸಿಎಂ ಆಯ್ಕೆ ನಡೆದ ಬಳಿಕ ಇದೀಗ ಕಾಂಗ್ರೆಸ್ ನಲ್ಲಿ ಸಚಿವ ಸಂಪುಟ ರಚನೆಯ ಕಸರತ್ತು ಜೋರಾಗಿ ನಡೆಯುತ್ತಿದ್ದು, ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಮಹತ್ವದ ಸಭೆ ನಡೆಯುತ್ತಿದೆ.

ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಕರ್ನಾಟಕ ಕಾಂಗ್ರೆಸ್ ಸಚಿವ ಸಂಪುಟ ರಚನೆ ಸಂಬಂಧ ಮಹತ್ವದ ಸಭೆ ನಡೆಯುತ್ತಿದೆ. ರಾಹುಲ್ ಗಾಂಧಿ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದಾರೆ.

ನಿಯೋಜಿತ ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಕೂಡ ಈ ಸಭೆಯಲ್ಲಿ ಭಾಗಿಯಾಗಿದ್ದು, ಸಚಿವ ಸಂಪುಟ ರಚನೆಯ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆಸುತ್ತಿದ್ದಾರೆ.

ಈಗಾಗಲೇ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಲವು ನಾಯಕರು ದೆಹಲಿಯಲ್ಲೇ ಬೀಡು ಬಿಟ್ಟಿದ್ದು, ಹುದ್ದೆಯ ಪೈಪೋಟಿಯಲ್ಲಿ ತೊಡಗಿದ್ದಾರೆ. ಯಾರಿಗೆ ಯಾವ ಸಚಿವ ಸ್ಥಾನ ನೀಡಬೇಕು ಎನ್ನುವ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನೇತೃತ್ವದಲ್ಲಿ ಈಗ ಚರ್ಚೆ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!