ಧರ್ಮದ ಹೆಸರಿನಲ್ಲಿ ಭಯೋತ್ಪಾದಕರಾಗುತ್ತಿದ್ದಾರೆ, ಮತಾಂತರ ಕಾನೂನುಬದ್ಧ ಮಾಡುತ್ತಿದ್ದೇವೆ: ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮತಾಂತರವನ್ನು ಕಾನೂನು ಬದ್ಧವಾಗಿ ಮಾಡಲಿ ಎಂದು ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕವನ್ನು ತರುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನ ಪರಿಷತ್​ನಲ್ಲಿ ಇಂದು ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ ಮಂಡಿಸಿ, ಮಾತನಾಡಿದ ಅವರು, ಸಂವಿಧಾನದ ಪ್ರಕಾರವೇ ಮತಾಂತರ ನಿಷೇಧ ಕಾಯ್ದೆ ಇರಲಿದೆ. ಮೂಲಭೂತ ಹಕ್ಕಿಗೆ ಚ್ಯುತಿ ತರುತ್ತಿಲ್ಲ. ಮತಾಂತರ ಮಾಡಬೇಡಿ ಎಂದು ಎಲ್ಲಿಯೂ ಹೇಳುತ್ತಿಲ್ಲ. ಆದರೆ, ಒತ್ತಾಯ, ಬಲವಂತ ಎನ್ನುವುದಷ್ಟೇ ಇದೆ. ಈಗಾಗಲೇ ಕೆಲ ರಾಜ್ಯಗಳಲ್ಲಿ ಈ ಕಾಯ್ದೆ ತರಲಾಗಿದೆ. ಸಂವಿಧಾನದ ಆರ್ಟಿಕಲ್ 25ರ ಉಲ್ಲಂಘನೆ ಮಾಡುವ ಅಂಶ ಕಾನೂನಿನಲ್ಲಿ ಇಲ್ಲ. ಕೋರ್ಟ್​ನಲ್ಲಿ ಪ್ರಶ್ನಿಸಿದ ನಂತರವೂ ಕಾನೂನು ಜಾರಿಯಾಗಿದೆ ಎಂದರು.

ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ಚಟುವಟಿಕೆ:
ಧರ್ಮಾಧಾರಿತ ಯುದ್ಧಗಳಿಂದ ಎಷ್ಟು ಸಾವು ನೋವುಗಳಾಗಿವೆ ಎನ್ನುವುದು ಇತಿಹಾಸದ ಪುಟದಲ್ಲಿದೆ. ಹಾಗಾಗಿ ನಾವು ಅಂತಹ ಘಟನೆಗಳಾಗಬಾರದು ಎಂದು ವಿಧೇಯಕ ತರುತ್ತಿದ್ದೇವೆ. ಇಂದು ಧರ್ಮವನ್ನು ಅದರ ಪಾಡಿಗೆ ಅದನ್ನು ಬಿಟ್ಟರೆ ಶಾಂತಿ, ಪ್ರೀತಿ ವಿಶ್ವಾಸ ಎಂದು ಬೋಧಿಸುತ್ತಾರೆ. ಆದರೆ ಇಂದು ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ಚಟುವಟಿಕೆ, ಧರ್ಮದ ಹೆಸರಿನಲ್ಲಿ ಅಧರ್ಮ ಮಾಡಲಾಗುತ್ತಿದೆ ಎಂದು ಹೇಳಿದರು.

ಒಂದು ಧರ್ಮದಲ್ಲೇ ತೀವ್ರತೆಯಿಂದ ಧರ್ಮದ ಹೆಸರಿನಲ್ಲಿ ಭಯೋತ್ಪಾದಕರಾಗುತ್ತಿದ್ದಾರೆ. ಇವೆಲ್ಲದರ ಒಟ್ಟು ಪರಿಣಾಮ ಸಮಾಜದಲ್ಲಿ ಅಪನಂಬಿಕೆ ಬರಲಿದೆ. ಹಾಗಾಗಿ ಮತಾಂತರ ಕಾನೂನು ಬದ್ಧವಾಗಿ ಮಾಡಲಿ ಎಂದು ತರುತ್ತಿದ್ದೇವೆ.ಸಾಧಕರು ಸಾವಿನ ನಂತರವೂ ಬದುಕಿದ್ದರೆ ಅವರು ರೆಬೆಲ್ಸ್, ಅವರು ರಾಜಿಯಾಗಲ್ಲ. ಏಕಾಗ್ರತೆಯಿಂದ ಇರುತ್ತಾರೆ ಎಂದು ಸಿಎಂ ಬೊಮ್ಮಾಯಿ ಸಮರ್ಥಿಸಿಕೊಂಡರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!