Friday, September 19, 2025

ನಟ ದರ್ಶನ್‌ಗೆ ಹಾಸಿಗೆ ದಿಂಬು: ಅರ್ಜಿ ವಿಚಾರಣೆ ಸೆ.25ಕ್ಕೆ ಮುಂದೂಡಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮತ್ತೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಸೆ.25ಕ್ಕೆ ಮುಂದೂಡಿದೆ.

ಕನಿಷ್ಠ ಮೂಲಭೂತ ಸೌಕರ್ಯ ನೀಡಬೇಕೆಂದು ನಿಯಮಗಳಿದ್ದು ಅದನ್ನು ಕೂಡ ಜೈಲಿನಲ್ಲಿ ನೀಡುತ್ತಿಲ್ಲ, ಜೈಲಿನಲ್ಲಿ ಹಾಸಿಗೆ, ದಿಂಬಿನಂತಹ ಕನಿಷ್ಠ ಸೌಲಭ್ಯವನ್ನೂ ನೀಡಬೇಕೆಂದು ಒತ್ತಾಯಿಸಿ ನಟ ದರ್ಶನ್ ಅರ್ಜಿ ಸಲ್ಲಿಸಿದ್ದರು.

ಇಂದು 57ನೇ ಸಿಟಿ ಸಿವಿಲ್ ಕೋರ್ಟ್ ನಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ನ್ಯಾಯಾಲಯ ಅರ್ಜಿ ವಿಚಾರಣೆಯನ್ನು ಇಂದು ಸೆಪ್ಟೆಂಬರ್ 25ಕ್ಕೆ ಮುಂದೂಡಿದೆ.

ಇದನ್ನೂ ಓದಿ