ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಕೊಡಗು:
ಕಾಫಿ ತೋಟವೊಂದರಿಂದ ಕೇರಳದ ಕೊಚ್ಚಿನ್ ಅಕ್ರಮವಾಗಿ ಬೀಟೆ ಮರ ಸಾಗಿಸಲು ಯತ್ನಿಸುತ್ತಿದ್ದ ಓರ್ವನನ್ನು ವೀರಾಜಪೇಟೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಕೇರಳದ ಮಲಪ್ಪುರಂ ಜಿಲ್ಲೆಯ ಕೆರುವಾಯಿ ನಿವಾಸಿ ಅನಾಸ್ ಎಂದು ಗುರುತಿಸಲಾಗಿದೆ.
ಕೊಡಗು ಜಿಲ್ಲೆಯ ಕರಡ ಗ್ರಾಮದ ಕಾಫಿ ತೋಟವೊಂದರಿಂದ ಬೀಟೆ ಮರಗಳನ್ನು ಕತ್ತರಿಸಿ ಪಿಕಪ್ ವಾಹನದಲ್ಲಿ ಸಾಗಿಸಲು ಯತ್ನಿಸುತ್ತಿದ್ದ ಸಂದರ್ಭ ಪೊಲೀಸರು ದಾಳಿ ನಡೆಸಿದ್ದು, ಕೃತ್ಯಕ್ಕೆ ಬಳಸಿದ್ದ ಪಿಕಪ್ ವಾಹನ ಸೇರಿದಂತೆ 2 ಲಕ್ಷ ಮೌಲ್ಯದ 5 ಬೀಟೆ ಮರದ ನಾಟಾಗಳನ್ನು ವಶಕ್ಕೆ ಪಡೆದಿದ್ದಾರೆ.
ನಾಪೋಕ್ಲು ಸಮೀಪದ ಕೊಳಕೇರಿ ನಿವಾಸಿ ಅಪ್ಪು ಎಂಬಾತನೊಂದಿಗೆ ಸೇರಿ ಈ ಕೃತ್ಯ ನಡೆಸಿರುವುದಾಗ ಹೇಳಲಾಗಿದ್ದು, ತಲೆಮರೆಸಿಕೊಂಡಿರುವ ಅಪ್ಪುವಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ.