ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಕೊಡಗು:
ತೋಟದಲ್ಲಿದ್ದ ಬೀಟೆ ಮರವನ್ನು ಕದ್ದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿರುವ ಮಡಿಕೇರಿ ಗ್ರಾಮಾಂತರ ಪೊಲೀಸರು 1.50 ಲಕ್ಷ ರೂ. ಮೌಲ್ಯದ ಮಾಲನ್ನು ವಶಕ್ಕೆ ಪಡೆದಿದ್ದಾರೆ.
ವಾಲ್ನೂರು- ತ್ತಾಗತ್ತೂರು ಗ್ರಾಮದ ವ್ಯಾಪಾರಿ ಇಬ್ರಾಹಿಂ(27), ಸಿದ್ದಾಪುರದ ವ್ಯಾಪಾರಿ ಉಮ್ಮರ್ ಎಂ.ಕೆ (33) ಹಾಗೂ ಮೈಸೂರು ನಗರದ ಚಾಲಕ ವೃತ್ತಿಯ ವಾಸಿಂ ಅಕ್ರಂ (25) ಬಂಧಿತ ಆರೋಪಿಗಳು. ಕಳವು ಮಾಡಿದ ಬೀಟೆ ಮರದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಚೇರಳ ಶ್ರೀಮಂಗಲ ಗ್ರಾಮದಲ್ಲಿರುವ ತಮ್ಮ ತೋಟದಲ್ಲಿ 80 ಅಡಿ ಉದ್ದದ 5 ಅಡಿ ದಪ್ಪದ ಬೀಟೆ ಮರ ಕಳವಾಗಿದೆ ಎಂದು ಚೇರಳ ಶ್ರೀಮಂಗಲ ಗ್ರಾಮದ ಬಿ.ಎಂ.ಬೋಪಯ್ಯ ಎಂಬವರು 2020ರ ನವೆಂಬರ್ ತಿಂಗಳಿನಲ್ಲಿ ದೂರು ನೀಡಿದ್ದರು.
ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರ ಅವರ ನಿರ್ದೇಶನದಂತೆ ಉಪ ವಿಭಾಗದ ಪ್ರಭಾರ ಪೊಲೀಸ್ ಉಪ ಅಧೀಕ್ಷಕ ಶೈಲೇಂದ್ರಕುಮಾರ್ ಅವರ ಮಾರ್ಗದರ್ಶನದಲ್ಲಿ ತನಿಖೆ ನಡೆಸಿದ ಮಡಿಕೇರಿ ಗ್ರಾಮಾಂತರ ಠಾಣಾ ನಿರೀಕ್ಷಕ ರವಿಕುಮಾರ್ ಕೆ.ಜೆ, ಸಿಬ್ಬಂದಿಗಳಾದ ಮಹೇಶ್ ಎಂ.ಕೆ. ದಿನೇಶ್, ಡಿಸಿಐಬಿ ಘಟಕದ ಯೋಗೇಶ್, ನಿರಂಜನ್, ಅನಿಲ್ ಕುಮಾರ್, ಶರತ್ ರೈ ಅವರುಗಳು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.