ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆ ಇನ್ನೇನು ಸಮೀಪದಲ್ಲೇ ಇದ್ದು, ಮಾಜಿ ಸಚಿವ ಡಾ. ಕೆ. ಸುಧಾಕರ್ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ತಾನೇ ಅಭ್ಯರ್ಥಿ ಎನ್ನುವಂತೆ ಪ್ರಚಾರ ನಡೆಸಿದ್ದಾರೆ.
ಚಿಕ್ಕಬಳ್ಳಾಪುರದ ಪೆರೆಸಂದ್ರ, ಅರೂರು ಹಾಗೂ ಮಂಚನಬಲೆ ಗ್ರಾಮದಲ್ಲಿ ಕಾರ್ಯಕರ್ತರ ಸಭೆ ನಡೆಸಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಿ ಎಂದು ಮನವಿ ಮಾಡಿದ್ದಾರೆ.
ನನಗೆ ಮುಖಂಡರ ಮೇಲೆ ಅಪಾರವಾದ ನಂಬಿಕೆ ಇದೆ. ನನಗೆ ಟಿಕೆಟ್ ಸಿಗುವ ಎಲ್ಲ ವಿಶ್ವಾಸ ಇದೆ. ಕಷ್ಟಕಾಲದಲ್ಲಿ ನನ್ನ ಪಕ್ಷ ಕೈ ಬಿಡುವುದಿಲ್ಲ, ಈ ಹಿಂದೆ ಬಿಜೆಪಿ ಸರ್ಕಾರ ರಚನೆ ವೇಳೆ ನಾನು ಕೂಡ ತ್ಯಾಗ ಮಾಡಿದ್ದೀನಿ ಎಂದು ಹೇಳಿದ್ದಾರೆ.