ಕೋವಿಡ್ ಕಣ್ಗಾವಲಿನ ನಡುವೆ ರಾಜ್ಯದಲ್ಲಿ ಎಸ್ಸೆಸೆಲ್ಸಿ ಪೂರಕ ಪರೀಕ್ಷೆ ಶುರು

ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದಿನಿಂದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಆರಂಭವಾಗಿದ್ದು, 94,649 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ.
ಇದರಲ್ಲಿ 110,415 ಶಾಲೆಗಳ 62,363 ವಿದ್ಯಾರ್ಥಿಗಳು, 31,283 ವಿದ್ಯಾರ್ಥಿನಿಯರು ಹಾಗೂ ಮೂರು ತೃತೀಯ ಲಿಂಗಿಗಳು ಸೇರಿದ್ದಾರೆ.
ಕೋವಿಡ್ ಮುನ್ನೆಚ್ಚರಿಕಾ ಕ್ರಮದ ಕಟ್ಟುನಿಟ್ಟಿನ ಅನುಷ್ಠಾನದಲ್ಲಿ ಜುಲೈ 4ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗೆ ಮೊದಲು, ನಂತರ ಸ್ಯಾನಿಟೈಸ್ ಮಾಡುವುದು. ಪರೀಕ್ಷಾ ಕೊಠಡಿಯ ಎಲ್ಲಾ ಪೀಠೋಪಕರಣ ಸ್ಯಾನಿಟೈಸ್, ದೈಹಿಕ ಅಂತರ ಕಾಪಾಡುವುದು, ಪ್ರತಿ ಕೊಠಡಿಯಲ್ಲಿ ಗರಿಷ್ಠ 20 ವಿದ್ಯಾರ್ಥಿಗಳಿಗೆ ಅವಕಾಶ, ಒಂದು ಡೆಸ್ಕ್ ಗೆ ಇಬ್ಬರು ವಿದ್ಯಾರ್ಥಿಯಂತೆ ಆಸನದ ವ್ಯವಸ್ಥೆ ಈ ನಿಯಮಾವಳಿಗಳನ್ನು ಪಾಲಿಸಲಾಗುತ್ತಿದೆ. ಜೊತೆಗೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಕಣ್ಗಾವಲಿರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!