ದಿಗಂತ ವರದಿ ಬಳ್ಳಾರಿ:
ವಿಧಾನ ಪರಿಷತ್ ಚುನಾವಣೆ ಮತ ಎಣಿಕೆ ಕಾರ್ಯ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಂಗಳವಾರ ಬೆಳಿಗ್ಗೆ ಆರಂಭಗೊಂಡಿದೆ. ಬಳ್ಳಾರಿ-ವಿಜಯನಗರ ಜಿಲ್ಲೆಯ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯ ಹಿನ್ನೆಲೆ ಕಾಲೇಜಿನಲ್ಲಿ ಇರಿಸಲಾಗಿದ್ದ ಮತಪೆಟ್ಟಿಗೆಯ ಭದ್ರತಾ ಕೊಠಡಿಯನ್ನು ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ಪವನ್ ಕುಮಾರ್ ಮಲಪಾಟೆ ಹಾಗೂ ವಿವಿಧ ಅಧಿಕಾರಿಗಳು ಹಾಗೂ ವಿವಿಧ ಪಕ್ಷಗಳ ಮುಖಂಡರ ಸಮ್ಮುಖದಲ್ಲಿ ಬೆಳಗ್ಗೆ 7.30ಕ್ಕೆ ತೆರೆಯಲಾಯಿತು. ನಂತರ 8ಕ್ಕೆ ಮತ ಎಣಿಕೆ ಕಾರ್ಯ ಆರಂಭಗೊಂಡಿದೆ.