Saturday, December 9, 2023

Latest Posts

ಬೇಗುಸರಾಯ್ ಜಿಲ್ಲೆಯಲ್ಲಿ ಫೈರಿಂಗ್:‌ ಏಳು ಪೊಲೀಸರ ಅಮಾನತು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬೇಗುಸರಾಯ್ ಜಿಲ್ಲೆಯಲ್ಲಿ ನಡೆದ ಪ್ರತ್ಯೇಕ ಗುಂಡಿನ ದಾಳಿಯಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟು ಇತರ ಒಂಭತ್ತು ಮಂದಿ ಗಾಯಗೊಂಡಿದ್ದಾರೆ. ಘಟನೆ ಬಳಿಕ ಬಿಹಾರ ಪೊಲೀಸ್‌ ಇಲಾಖೆ ಬುಧವಾರ ಏಳು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ. ಈ ಬಗ್ಗೆ ಮಾಹತಿ ನೀಡಿದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಜಿತೇಂದ್ರ ಸಿಂಗ್ ಗಂಗ್ವಾರ್, ʻಘಟನೆ ವೇಲೆ ನಮ್ಮ ಪೊಲೀಸರು ಗಸ್ತು ತಿರುಗುತ್ತಿದ್ದರೂ ಆರೋಪಿಗಳನ್ನು ಹಿಡಿದಿಲ್ಲ. ಇವರ ನಿರ್ಲಕ್ಷ್ಯತನದಿಂದ ಒಂದು ಜೀವ ಬಲಿಯಾಗಿದೆ. ಈ ಸಂಬಂಧ ತಕ್ಷಣದಿಂದ ಜಾರಿಗೆ ಬರುವಂತೆ ಏಳು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದರು.

ಸಿಸಿಟಿವಿ ದೃಶ್ಯಾವಳಿಗಳಲ್ಲಿ ದಾಳಿಕೋರರನ್ನು ಸೆರೆಹಿಡಿಯಲಾಗಿದೆ. ಈ ಬಗ್ಗೆ ಪೊಲೀಸರು ಅವರ ಗುರುತನ್ನು ಪರಿಶೀಲಿಸುತ್ತಿದ್ದಾರೆ. ಈಗಾಗಲೇ ಕೆಲವರನ್ನು ಬಂಧಿಸಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದು, ನೆರೆಯ ಜಿಲ್ಲೆಗಳಿಗೂ ಸಹ ಎಚ್ಚರಿಕೆ ನೀಡಲಾಗಿದೆ. ಪ್ರತ್ಯೇಕ ತನಿಖಾ ತಂಡವು ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿದೆ. ಆದಷ್ಟು ಬೇಗ ಆರೋಪಿಗಳನ್ನು ಹಿಡಿಯುತ್ತೇವೆ ಎಂಬ ಭರವಸೆ ನೀಡಿದರು.

ಬಿಹಾರದ ಬೇಗುಸರಾಯ್‌ನಲ್ಲಿ ಮಂಗಳವಾರ ವಿವಿಧ ಸ್ಥಳಗಳಲ್ಲಿ ನಡೆದ ಪ್ರತ್ಯೇಕ ಗುಂಡಿನ ದಾಳಿಯಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದರೆ, ಒಂಭತ್ತು ಮಂದಿ ಗಾಯಗೊಂಡಿದ್ದಾರೆ. ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮನಸೋ ಇಚ್ಛೆ ಗುಂಡಿನ ದಾಳಿ ನಡೆಸಿದರು. ಗುಂಡೇಟಿನಿಂದ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ಕರೆತರಲಾಗಿದೆ ಎಂದು ತೆಗ್ರಾದ ಸರ್ಕಾರಿ ಆಸ್ಪತ್ರೆಯ ವೈದ್ಯರು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!