ʼಆರೆಸ್ಸೆಸ್‌ ಟೂಲ್‌ ನಂತೆ ವರ್ತಿಸುತ್ತಿದ್ದಾರೆʼ:‌ ಕೇರಳ ರಾಜ್ಯಪಾಲರ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಪಿಣರಾಯಿ ವಿಜಯನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದ ಒಂಬತ್ತು ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳು ತಮ್ಮ ರಾಜೀನಾಮೆಯನ್ನು ಸಲ್ಲಿಸುವಂತೆ ಕೇಳಿದ್ದಕ್ಕಾಗಿ ಕೇರಳ ರಾಜ್ಯಪಾಲ ಆರೀಫ್‌ ಮೊಹಮದ್‌ ಖಾನ್‌ ಅವರ ವಿರುದ್ಧ ಸಿಎಂ ಪಿಣರಾಯಿ ವಿಜಯನ್ ವಾಗ್ದಾಳಿ ನಡೆಸಿದ್ದು ʼರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಆರ್‌ಎಸ್‌ಎಸ್‌ನ ಸಾಧನವಾಗಿ ವರ್ತಿಸುತ್ತಿದ್ದಾರೆ ಮತ್ತು ಅವರ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆʼ ಎಂದು ಆರೋಪಿಸಿದ್ದಾರೆ.

“ರಾಜ್ಯಪಾಲರು ಕುಲಪತಿ ಹುದ್ದೆಯನ್ನು ದುರುಪಯೋಗಪಡಿಸಿಕೊಂಡು ತಮ್ಮ ಅಧಿಕಾರಕ್ಕಿಂತ ಹೆಚ್ಚಿನ ಅಧಿಕಾರವನ್ನು ಚಲಾಯಿಸುತ್ತಿದ್ದಾರೆ. ಇದು ಪ್ರಜಾಪ್ರಭುತ್ವ ವಿರೋಧಿ ಮತ್ತು ವಿಸಿಗಳ ಅಧಿಕಾರದ ಮೇಲಿನ ಅತಿಕ್ರಮಣವಾಗಿದೆ. ರಾಜ್ಯಪಾಲರ ಹುದ್ದೆಯು ಸರ್ಕಾರದ ವಿರುದ್ಧ ನಡೆಯುವುದಲ್ಲ, ಸಂವಿಧಾನದ ಘನತೆಯನ್ನು ಎತ್ತಿ ಹಿಡಿಯುವುದು. ಅವರು ಆರ್‌ಎಸ್‌ಎಸ್‌ನ ಸಾಧನವಾಗಿ ವರ್ತಿಸುತ್ತಿದ್ದಾರೆ” ಎಂದು ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಏಎನ್‌ಐ ವರದಿ ಮಾಡಿದೆ.

ರಾಜ್ಯಪಾಲರ ಹುದ್ದೆ ಸರ್ಕಾರದ ವಿರುದ್ಧ ನಡೆಯುವುದಲ್ಲ, ಸಂವಿಧಾನದ ಘನತೆಯನ್ನು ಎತ್ತಿ ಹಿಡಿಯುವುದಾಗಿದೆ. ಇದು ಪ್ರಜಾಪ್ರಭುತ್ವ ವಿರೋಧಿ ಮತ್ತು ವಿಸಿಗಳ ಅಧಿಕಾರದ ಮೇಲಿನ ಅತಿಕ್ರಮಣವಾಗಿದೆ ಎಂದು ಪಿಣರಾಯಿ ವಿಜಯನ್‌ ಹೇಳಿದ್ದಾರೆ.

ಉಪಕುಲಪತಿಗಳು ರಾಜೀನಾಮೆ ನೀಡುವಂತೆ ರಾಜ್ಯಪಾಲರು ನಿರ್ದೇಶನ ನೀಡಿದ ಒಂದು ದಿನದ ನಂತರ ಈ ಹೇಳಿಕೆ ಹೊರಬಿದ್ದಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!