July 17, 2026
Friday, July 17, 2026
spot_img

ಶಿವಂ ಅಸೋಸಿಯೇಟ್ಸ್ ಪ್ರಕರಣದ ಬೆನ್ನೆಲೆ ; ಚಿತ್ರರಂಗದ ತಾರೆಯರಿಂದಲೂ ಮಾಹಿತಿ ಸಂಗ್ರಹಕ್ಕೆ ಸಿಐಡಿ ಚಿಂತನೆ

ಹೊಸದಿಗಂತ ವರದಿ ಬೆಳಗಾವಿ :

ಶಿವಂ ಅಸೋಸಿಯೇಟ್ಸ್ ಬಹುಕೋಟಿ ರೂಪಾಯಿ ಠೇವಣಿ ವಂಚನೆ ಪ್ರಕರಣದ ತನಿಖೆಯನ್ನು ಸಿಐಡಿ ಚುರುಕುಗೊಳಿಸಿದೆ.
ಪ್ರಕರಣದ ವಿವಿಧ ಆಯಾಮಗಳ ಕುರಿತು ಪರಿಶೀಲನೆ ನಡೆಸುತ್ತಿರುವ ಅಧಿಕಾರಿಗಳು, ಹಣದ ಹರಿವು ಹಾಗೂ ಹೂಡಿಕೆದಾರರ ಹಣದ ಬಳಕೆಯ ಕುರಿತ ಮಾಹಿತಿ ಸಂಗ್ರಹಿಸಲಾಗುತ್ತಿದೆ.‌

ಕಳೆದ ಡಿಸೆಂಬರ್ 27ರಂದು ಬೆಳಗಾವಿಯಲ್ಲಿ ನಡೆದಿದ್ದ “ಕನ್ನಡದ ಉತ್ಸವ” ಕಾರ್ಯಕ್ರಮವೂ ತನಿಖೆಯ ವ್ಯಾಪ್ತಿಗೆ ಬಂದಿದ್ದು, ಈ ಕಾರ್ಯಕ್ರಮಕ್ಕೆ ವೆಚ್ಚವಾದ ಹಣದ ಮೂಲದ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗದ ಹಲವು ನಟ-ನಟಿಯರು ಭಾಗವಹಿಸಿದ್ದರು. ಸಿಐಡಿ ತನಿಖೆಯ ಭಾಗವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೆಲ ಕಲಾವಿದರಿಂದ ಮಾಹಿತಿ ಪಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಆದರೆ, ನಟ-ನಟಿಯರಿಗೆ ಈಗಾಗಲೇ ನೋಟಿಸ್ ಜಾರಿ ಮಾಡಲಾಗಿದೆ ಎಂಬುದಕ್ಕೆ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ ಎನ್ನಲಾಗಿದೆ.

ಶಿವಂ ಅಸೋಸಿಯೇಟ್ಸ್ ವಿರುದ್ಧ ಸಾವಿರಾರು ಹೂಡಿಕೆದಾರರಿಂದ ಹಣ ಸಂಗ್ರಹಿಸಿ ವಂಚನೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ. ತನಿಖೆಯ ಪ್ರಗತಿಯೊಂದಿಗೆ ಇನ್ನಷ್ಟು ಮಾಹಿತಿ ಬಹಿರಂಗವಾಗುವ ಸಾಧ್ಯತೆ ಇದು ಇನ್ನು ಈ ಪ್ರಕರಣದಲ್ಲಿ ಯಾರ್ಯಾರು ಭಾಗಿಯಾಗಿದ್ದಾರೆ ಎಂಬುವುದು ತನಿಖೆಯ ಬಳಿಕವೇ ತಿಳಿದು ಬರಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !