ಸಂಸದ ಸ್ಥಾನದಿಂದ ಅನರ್ಹವಾಗಿದ್ದು ಜನರ ಸೇವೆಗೆ ಸಿಕ್ಕ ಅವಕಾಶ: ರಾಹುಲ್ ಗಾಂಧಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಅಮೆರಿಕ ಪ್ರವಾಸದಲ್ಲಿರುವ ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ , ಸ್ಟ್ಯಾನ್‍ಫೋರ್ಡ್ ವಿಶ್ವವಿದ್ಯಾಲಯದಲ್ಲಿ (Stanford University Campus in California) ಭಾರತೀಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಈ ಕ್ಷಣ ನಾನು ಸಂಸದ ಸ್ಥಾನದಿಂದ ಅನರ್ಹವಾಗಿದ್ದರಿಂದ ನನಗೆ ಜನರ ಸೇವೆ ಮಾಡಲು ದೊಡ್ಡ ಅವಕಾಶ ಸಿಕ್ಕಿದೆ ಎಂದ ಹೇಳಿದ್ದಾರೆ.

ರಾಜಕೀಯಕ್ಕೆ ಬಂದಾಗ ಸಂಸದನ ಸ್ಥಾನದಿಂದ ಅನರ್ಹಗೊಳ್ಳುತ್ತೇನೆ ಎಂದು ನಾನು ಊಹಿಸಿರಲಿಲ್ಲ. ಆದರೆ ಅನರ್ಹತೆಯಿಂದಾಗಿ ದೇಶದ ಜನರ ಸೇವೆಯಲ್ಲಿ ತೊಡಗಿಕೊಳ್ಳುವ ಹೊಸ ಅವಕಾಶ ತೆರೆದುಕೊಂಡಿದೆ ಎಂದಿದ್ದಾರೆ.

ಭಾರತದಲ್ಲಿ ಇಂದು ಪ್ರತಿಪಕ್ಷಗಳು ತೊಂದರೆ ಎದುರಿಸುತ್ತಿವೆ.ಪ್ರಜಾಸತ್ತಾತ್ಮಕ ಹೋರಾಟವನ್ನು ನಡೆಸಲು ಸಹ ಹೆಣಗಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಯನ್ನು (Bharat Jodo Yatra) ಕೈಗೊಳ್ಳುವ ತೀರ್ಮಾನ ಮಾಡಿತು ಎಂದು ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!