ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ನಲ್ಲಿ 63 ಇಂಜಿನಿಯರಿಂಗ್ ಅಸಿಸ್ಟೆಂಟ್ ಟ್ರೈನಿ, ಟೆಕ್ನೀಶಿಯನ್ ಮತ್ತು ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಬಿ.ಕಾಂ, ಬಿಬಿಎಂ, ಡಿಪ್ಲೋಮಾ, ಹತ್ತನೇ ತರಗತಿ, ಐಟಿಐ ವಿದ್ಯಾರ್ಹತೆ ಜೊತೆಗೆ ಆಗಸ್ಟ್ 1,2023ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,500/- ರಿಂದ 90,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಸೆಪ್ಟೆಂಬರ್ 5,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.