ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್‌ನಲ್ಲಿ 96 ಟ್ರೈನಿ ಮತ್ತು ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಬಿ.ಇ, ಬಿ.ಎಸ್ಸಿ, ಬಿ.ಟೆಕ್ ವಿದ್ಯಾರ್ಹತೆ ಜೊತೆಗೆ ಗರಿಷ್ಟ 32 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/- ರಿಂದ 55,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಇಂಜಿನಿಯರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಜೂನ್ 28,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.