Tuesday, August 16, 2022

Latest Posts

ಬೆಳಗಾವಿಯಲ್ಲಿ ಭೀಕರ ಅಪಘಾತ: ನಾಲೆಗೆ ಉರುಳಿದ ಕ್ರೂಸರ್, 11 ಸಾವು

ಹೊಸದಿಗಂತ ವರದಿ ಬೆಳಗಾವಿ:

ಬೆಳಗಾವಿ ತಾಲೂಕಿನ ಕಣಬರಗಿ ಸಮೀಪ ಕ್ರೂಸರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಉರುಳಿಬಿದ್ದುದ್ದು, 11 ಮಂದಿ ಕೂಲಿ ಕಾರ್ಮಿಕರು ಸಾವಿಗೀಡಾಗಿದ್ದಾರೆ. ಲಭ್ಯ ಮಾಹಿತಿಗಳ ಪ್ರಕಾರ 7 ಮಂದಿ ಸ್ಥಳದಲ್ಲಿಯೇ ದಾರುಣವಾಗಿ ಸಾವನ್ನಪ್ಪಿದ್ದಾರೆ. 4 ಜನರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ಸಾಗಿಸುವಾಗ ನಾಲ್ವರು ಮೃಪಟ್ಟಿದ್ದಾರೆ. ಗೋಕಾಕ ರಸ್ತೆಯ ಕಲ್ಯಾಳ ಸೇತುವೆಯ ಬಳಿ ಕಮಲಾಪೂರದಲ್ಲಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಘಟನೆಯಲ್ಲಿ ಗಂಭೀರ ಗಾಯಗೊಂಡಿರುವವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರ ಕುರಿತು ಇನ್ನೂ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss