Tuesday, August 16, 2022

Latest Posts

ಬೆಳಗಾವಿ ಭೀಕರ ದುರಂತ: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ

ಹೊಸದಿಗಂತ ವರದಿ ಯಲ್ಲಾಪುರ:

ಗೋಕಾಕದಿಂದ ಬೆಳಗಾವಿಗೆ ತೆರಳುವ ಮಾರ್ಗದಲ್ಲಿ ಕ್ರೂಸರ್ ವಾಹನ ಅಪಘಾತಕ್ಕೀಡಾಗಿ 11 ಜನ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ದುರಾದೃಷ್ಟಕರ ಘಟನೆ ನಡೆದಿದೆ. ಸಾವನ್ನಪ್ಪಿರುವ ಕುಟುಂಬಕ್ಕೆ ಸರ್ಕಾರದ ಪರವಾಗಿ ಹಾಗೂ ಕಾರ್ಮಿಕ ಇಲಾಖೆ ಪರವಾಗಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಸಾಂತ್ವನ‌ ಹೇಳಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆಯಂತೆ ಕಾರ್ಮಿಕ ಇಲಾಖೆಯ ಕಾರ್ಡ್ ಇರುವ ಅಪಘಾತದಲ್ಲಿ ಮೃತರಾದ 5 ಜನರ ಕುಟುಂಬದವರಿಗೆ ಕಾರ್ಮಿಕ ಇಲಾಖೆಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ತಲಾ 5ಲಕ್ಷ ರೂ ಪರಿಹಾರವನ್ನು ಅತಿ ಶೀಘ್ರವಾಗಿ ನೀಡಲಾಗುವುದು.

ಅಲ್ಲದೆ ಉಳಿದ 4ಜನ ಕಾರ್ಮಿಕರಿಗೆ ಮಾನವೀಯ ನೆಲೆಯಲ್ಲಿ ತಲಾ 3ಲಕ್ಷ ರೂಪಾಯಿ ಪರಿಹಾರವನ್ನು ಅವರ ಆಶ್ರಿತರಿಗೆ ನೀಡಲಾಗುವುದು. ಈ ಪರಿಹಾರವನ್ನು ಅತಿ ಶೀಘ್ರದಲ್ಲಿ ಅವರ ಕುಟುಂಬದವರಿಗೆ ತಲುಪಿಸಲಾಗುವುದು ಹಾಗೂ ಗಾಯಾಳುಗಳಿಗೆ ಸಹ ಉತ್ತಮ ರೀತಿಯ ಚಿಕಿತ್ಸೆ ದೊರಕುವಂತೆ ಕ್ರಮವಹಿಸುವುದಾಗಿ ಶಿವರಾಮ ಹೆಬ್ಬಾರ್ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss