ಹೊಸದಿಗಂತ ವರದಿ, ಬೆಳಗಾವಿ:
ತೀವ್ರ ಕುತೂಹಲ ಕೆರಳಿಸಿರುವ ಬೆಳಗಾವಿ ಲೋಕಸಭಾ ಉಪಚುನಾವಣೆಯ ಮತ ಎಣಿಕೆಯ 12 ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಅಲ್ಪ ಮತಗಳ ಮುನ್ನಡೆ ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ 1200 ಅಧಿಕ ಮತಗಳ ಮುನ್ನಡೆ ಸಾಧಿಸಿದ್ದರೆ, 11 ಸುತ್ತುಗಳ ಮತ ಎಣಿಕೆಯಲ್ಲಿ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಹಿನ್ನಡೆ ಅನುಭವಿಸಿದ್ದಾರೆ.
ಎರಡು ರಾಷ್ಟ್ರೀಯ ಪಕ್ಷಗಳ ಮಧ್ಯೆ ಜಿದ್ದಾ ಜಿದ್ದಿನ ಕಣವಾಗಿರುವ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಮತದಾರ ಯಾರಿಗೆ ಸಿಹಿ ಯಾರಿಗೆ ಕಹಿ ನೀಡಿದ್ದಾರೆ ಎನ್ನುವುದು ಸಧ್ಯದಲ್ಲಿ ತಿಳಿಯಲಿದೆ.