ಹೊಸದಿಗಂತ ವರದಿ, ಬೆಳಗಾವಿ:
ಬೆಳಗಾವಿಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವರಾಜ ನಾಲತವಾಡ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಶಿಕ್ಷಣ ಸಂಸ್ಥೆಯ ಪರವಾಗಿ ನವೀಕರಣಕ್ಕಾಗಿ 40 ಸಾವಿರ ರೂ. ಲಂಚ ಪಡೆಯುವಾಗ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸ್ ರು ನಾಲತವಾಡ ಅವರನ್ನು ವಶಕ್ಕೆ ಪಡೆದಿದ್ದಾರೆ.
ಕಿತ್ತೂರು ತಾಲೂಕಿನ ತುರಮರಿ ಗ್ರಾಮದ ಬಸವೇಶ್ವರ ಶಿಕ್ಷಣ ಸಂಸ್ಥೆಯ ಪರವಾನಗಿ ನವೀಕರಣ ಮಾಡಿಕೂಡಲು ಲಂಚ ಕೇಳಿದ್ದರು. ಈ ಹಿನ್ನೆಲೆಯಲ್ಲಿ ಸಂಸ್ಥೆ ಮುಖ್ಯಸ್ಥ ಅರ್ಜುನ ಕುರಿ ಎಂಬವರು ಲೋಕಾಯುಕ್ತರಿಗೆ ದೂರು ನೀಡಿದ್ದರು.