Tuesday, August 16, 2022

Latest Posts

ಬಿಜೆಪಿ ಪ್ರವರ್ಧಮಾನ, ಎಂಇಎಸ್ ನಿರ್ನಾಮ: ಬೆಳಗಾವಿ ಪಾಲಿಕೆ ಚುನಾವಣಾ ಹೈ ಲೈಟ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಬೆಳಗಾವಿ

ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾ ಮೂರು ರಾಜ್ಯಗಳ ಕೊಂಡಿಯಾಗಿರುವ ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ 36 ಅಭ್ಯರ್ಥಿಗಳು ಭರ್ಜರಿ ಗೆಲವು ಸಾಧಿಸಿದ್ದಾರೆ.
ಮಹಾನಗರ ಪಾಲಿಕೆಯಲ್ಲಿ ಅಧಿಕಾರವಿದ್ದಾಗ ಅಭಿವೃದ್ಧಿಯ ಕಡೆಗೆ ಗಮನ ಹರಿಸದೆ ಗಡಿ ಹಾಗೂ ಭಾಷಾ ವಿಷಯವನ್ನು ಕೆಣುಕುತ್ತಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿ ಈ ಚುನಾವಣೆಯಲ್ಲಿ ಸಂಪೂರ್ಣ ನಿರ್ನಾಮವಾಗಿದೆ.
ಈವರೆಗೆ ಗಡಿ ಹಾಗೂ ಭಾಷೆಯ ಆಧಾರದ ಮೇಲೆ ಆಟವಾಡುತ್ತಿದ್ದ ಎಂಇಎಸ್ ಬಣ್ಣ ಈಗ ಬಯಲಾಗಿದೆ. ಮತದಾರರು ಪಾಲಿಕೆಯ ಚುನಾವಣೆಯಲ್ಲಿ ಎಂಇಎಸ್ ಬೇರು ಸಮೇತ ಕಿತ್ತು ಹಾಕಿರುವುದು ಈ ಬಾರಿಯ ಮಹಾನಗರ ಪಾಲಿಕೆ ಚುನಾವಣೆಯ ವಿಶೇಷವಾಗಿದೆ.
ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ 58 ವಾರ್ಡಗಳಲ್ಲಿ ಬಿಜೆಪಿ 36 ವಾರ್ಡ್ ಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದು, ಮೊದಲ ಬಾರಿಗೆ ಪಾಲಿಕೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡದಿದೆ.
ಕಾಂಗ್ರೆಸ್ 9 ಸ್ಥಾನಗಳಲ್ಲಿ ಗೆಲವು ಸಾಧಿಸಿದರು ಎರಡಂಕಿ ದಾಟುವಲ್ಲಿ ವಿಫಲವಾಗಿದೆ. ಎಂಇಎಸ್ 2, ಪಕ್ಷೇತರ 5 ಹಾಗೂ ಎಐಎಂಐಎಂ 1 ವಾರ್ಡ್ ನಲ್ಲಿ ಗೆಲುವು ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.
ಬಿಜೆಪಿ ವಿಜಯೋತ್ಸವದ ಸಮಯದಲ್ಲಿ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ದ್ದಾರೆ. ಈ ಸಂದರ್ಭದಲ್ಲಿ ನೂಕು ನುಗ್ಗಲಿನಿಂದ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss