August 24, 2026
Monday, August 24, 2026
spot_img

ಬೆಳಗಾವಿಯಲ್ಲಿ ಬುಡಸಮೇತ ನೆಲಕ್ಕುರುಳಿದ ಬೃಹತ್‌ ಮರ: ತಪ್ಪಿದ ಭಾರೀ ಅನಾಹುತ

ಹೊಸದಿಗಂತ ವರದಿ ಬೆಳಗಾವಿ :

ಬೆಳಗಾವಿ ನಗರದ ಮಾಳಮಾರುತಿ ಪೊಲೀಸ್ ಠಾಣೆಗೆ ತೆರಳುವ ಮಾರ್ಗದಲ್ಲಿ ಬೃಹತ್‌ ಮರವೊಂದು ಹಠಾತ್ತಾಗಿ ಬುಡಸಮೇತ ಕಿತ್ತು ಬಿದ್ದ ಘಟನೆ ನಡೆದಿದೆ.

ಘಟನೆ ಸಂಭವಿಸಿದ ವೇಳೆ ರಸ್ತೆಯಲ್ಲಿ ವಾಹನ ಸಂಚಾರ ವಿರಳವಾಗಿದ್ದರಿಂದ ಯಾವುದೇ ಪ್ರಾಣಾಪಾಯ ಅಥವಾ ದೊಡ್ಡ ಅನಾಹುತ ಸಂಭವಿಸಿಲ್ಲ. ಮರ ರಸ್ತೆ ಮಧ್ಯೆ ಬಿದ್ದ ಪರಿಣಾಮ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.

ಸ್ಥಳೀಯರು ಹಾಗೂ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡರು. ಬಳಿಕ ಮರವನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿ ಸಂಚಾರವನ್ನು ಪುನಃ ಸುಗಮಗೊಳಿಸಲಾಯಿತು. ಘಟನೆಯಿಂದ ಸ್ಥಳೀಯರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !