ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ: ಪಾಲಿಕೆ ಸಭೆಯಲ್ಲಿ ಗೊತ್ತುವಳಿ ಅಂಗೀಕಾರ

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬುದನ್ನು ಸ್ಪಷ್ಟಪಡಿಸುವ ಗೊತ್ತುವಳಿಯನ್ನು ಬೆಳಗಾವಿ ಮಹಾನಗರ ಪಾಲಿಕೆಯ ಪರಿಷತ್ ಸಭೆಯಲ್ಲಿ ಬುಧವಾರ ಅಂಗೀಕರಿಸಲಾಯಿತು. ಈ ವಿಚಾರದ ಬಗ್ಗೆ ಕನ್ನಡಪರ ಸಂಘಟನೆಗಳು ಕಳೆದ ಆರು ತಿಂಗಳುಗಳಿಂದ ನಡೆಸುತ್ತಿದ್ದ ಹೋರಾಟಕ್ಕೆ ಮಹತ್ವದ ಪ್ರತಿಫಲ ದೊರೆತಂತಾಗಿದೆ. 1988ರಲ್ಲಿ ಅಂದಿನ ರಾಜ್ಯ ಸರ್ಕಾರವು ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬುದನ್ನು ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿತ್ತು. ಇದೇ ವಿಚಾರವಾಗಿ ಸರ್ಕಾರವು ಬೆಳಗಾವಿ ಮಹಾನಗರ ಪಾಲಿಕೆಗೆ ಈ ಹಿಂದೆ ಎರಡು ಬಾರಿ ಪತ್ರಗಳ ಮೂಲಕ ನಿರ್ದೇಶನ ನೀಡಿತ್ತು. … Continue reading ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ: ಪಾಲಿಕೆ ಸಭೆಯಲ್ಲಿ ಗೊತ್ತುವಳಿ ಅಂಗೀಕಾರ