Thursday, June 30, 2022

Latest Posts

ಬೆಳಗಾವಿ ಲೋಕಸಭಾ ಉಪಚುನಾವಣೆ: 9 ಗಂಟೆ ವೇಳೆಗೆ ಶೇ. 5.47 ರಷ್ಟು ಮತದಾನ

ಹೊಸದಿಗಂತ ವರದಿ, ಬೆಳಗಾವಿ:

ಕೇಂದ್ರ ಸಚಿವರಾಗಿದ್ದ ದಿ. ಸುರೇಶ ಅಂಗಡಿ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಉಪಚುನಾವಣೆಯ ಮತದಾನ ಪ್ರಕ್ರಿಯೆ ಸಣ್ಣ ಪುಟ್ಟ ತಾಂತ್ರಿಕ ಸಮಸ್ಯೆಗಳನ್ನು ಹೊರತುಪಡಿಸಿ ಶನಿವಾರ ಮುಂಜಾನೆ 7 ಗಂಟೆಯಿಂದ ಆರಂಭವಾಗಿದ್ದು 9ರ ತನಕ ಶೇ. 5.47 ರಷ್ಟು ಮತದಾನವಾಗಿದೆ.

ಗ್ರಾಮೀಣ ಪ್ರದೇಶದ ಮತದಾರರು ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದರೆ, ನಗರ ಪ್ರದೇಶದ ಮತದಾರರು ಮುಂಜಾನೆ ಮತದಾನಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತಪಡಿಸಿದ ದೃಶ್ಯಗಳು ಕಂಡು ಬಂದವು.

ಕೊವೀಡ್-19 ಎಲ್ಲ ಮುನ್ನೆಚ್ಚರಿಕೆಯ ಕ್ರಮಗಳನ್ನು ಪ್ರತಿಯೊಂದು ಮತಗಟ್ಟೆಗಳಲ್ಲಿ ಅಳವಡಿಸಲಾಗಿದೆ. ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು ಪ್ರತಿಯೊಬ್ಬ ಮತದಾರರ ಕೈಗೆ ಸ್ಯಾನಿಸ್ಟೈಜರ್, ಥರ್ಮಲ್ ಸ್ಕಾನ್ ಮಾಡಿ, ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಮನವಿ ಮಾಡುತ್ತಿದ್ದರು. ಮತಗಟ್ಟೆಯ ಸಿಬ್ಬಂದಿ ಸಹ ಕೊವೀಡ್ ಮಾರ್ಗಸೂಚಿಯಂತೆ ಮಾಸ್ಕ್ ಹಾಗೂ ಇನ್ನಿತರ ವಸ್ತುಗಳ ಬಳಕೆ ಮಾಡುತ್ತಿದ್ದರು.

ಒಂದು ಸಾವಿರ ಅಧಿಕ ಮತದಾರರಿರುವ ಮತಗಟ್ಟೆಗಳಲ್ಲಿ‌ ಹೆಚ್ಚುವರಿ ಮತಗಟ್ಟೆ ಸ್ಥಾಪಿಸಿ ಜನ ದಟ್ಟಣೆಯಾಗದಂತೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss