ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮತ್ತು ಇತರ ಕ್ರಿಮಿನಲ್ಗಳಿಗೆ ಹೈಕೋರ್ಟ್ ರಿಲೀಫ್ ನೀಡಿದೆ.
ಸಿಬಿಐ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ಜನಪ್ರತಿನಿಧಿ ನ್ಯಾಯಾಲಯ ಒಟ್ಟು ಆರು ಪ್ರಕರಣಗಳಲ್ಲಿ ಆರೋಪಿಗಳು ತಪ್ಪಿತಸ್ಥರೆಂದು ತೀರ್ಪು ನೀಡಿತ್ತು. ಈ ಬಗ್ಗೆ ಪ್ರಶ್ನಿಸಿ ಆರೋಪಿಗಳ ಪರ ವಕೀಲರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಜನಪ್ರತಿನಿಧಿ ನ್ಯಾಯಾಲಯ ನಿರ್ಧರಿಸಿದ ಶಿಕ್ಷೆಯನ್ನು ಅಮಾನತುಗೊಳಿಸಿ ಆದೇಶಿಸಿದೆ.
6 ವಾರದಲ್ಲಿ ದಂಡದ ಮೊತ್ತದಲ್ಲಿ ಶೇ.25ರಷ್ಟು ಠೇವಣಿ ಕೋರ್ಟ್ನಲ್ಲಿ ಇಡುವಂತೆ ಅಪರಾಧಿಗಳಿಗೆ ಸೂಚಿಸಿ ಶಿಕ್ಷೆ ಅಮಾನತಿನಲ್ಲಿಟ್ಟು ಆದೇಶಿಸಿದೆ, ಈ ಹಿನ್ನೆಲೆ ಶಾಸಕ ಸತೀಶ್ ಸೈಲ್ ಸೇರಿದಂತೆ ಇತರೆ ಅಪರಾಧಿಗಳು ನಾಳೆ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.