Thursday, August 18, 2022

Latest Posts

ಬೆಳಗಾವಿ| ನೆರೆ ಪೀಡಿತ ಪ್ರದೇಶಗಳ ಪರಿಶೀಲನೆಗೆ ಆಗಮಿಸಿರುವ ಕೇಂದ್ರ ಅಧ್ಯಯನ ತಂಡ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆಮಾಸ್ಕ್ ಧರಿಸಿಸಾಮಾಜಿಕ ಅಂತರ ಕಾಯ್ದುಕೊಳ್ಳಿಕೈಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿನೀವೂ ಸುರಕ್ಷಿತರಾಗಿರಿನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಬೆಳಗಾವಿ:

ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳ ಎರಡು ದಿನಗಳ ಭೇಟಿಗಾಗಿ ಜಿಲ್ಲೆಗೆ ಆಗಮಿಸಿರುವ ಕೇಂದ್ರ ಅಧ್ಯಯನ ತಂಡದ ಸದಸ್ಯರು ಭಾನುವಾರ ಖಾನಾಪುರ, ಹುಕ್ಕೇರಿ, ಗೋಕಾಕ ತಾಲೂಕಿನ ಮಲಪ್ರಭಾ, ಘಟಪ್ರಭಾ ಇನ್ನಿತರ ನದಿಗಳಿಂದ ಹಾನಿಗಿಡಾದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಶೀಲನೆ ನಡೆಸಿದರು.
ಇದಕ್ಕೂ ಮೊದಲು ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಕೇಂದ್ರ ಅಧ್ಯಯನ ತಂಡದ ಸದಸ್ಯರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಜಿಲ್ಲೆಯಲ್ಲಿ ಮಳೆಯಿಂದ ಹಾಗೂ ನದಿಗಳ ಪ್ರವಾಹದಿಂದ ಹಾನಿಗಿಡಾದ ಬಗ್ಗೆ ವಿವರಿಸಿದರು.
ಜಿಪಂ ಸಿಇಒ ದರ್ಶನ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!