ಬೆಳಗಾವಿ-ಬೆಂಗಳೂರು ವಂದೇ ಭಾರತ್ ರೈಲು ಸಂಚಾರಕ್ಕೆ ಸಿಕ್ಕಿತು ಹಸಿರು ನಿಶಾನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬೆಳಗಾವಿ-ಬೆಂಗಳೂರು ಮಧ್ಯೆ ವಂದೇ ಭಾರತ್ ರೈಲು ಸಂಚಾರ ಆರಂಭಿಸಲು ರೈಲ್ವೆ ಇಲಾಖೆ ಮುಂದಾಗಿದೆ.

ಬೆಂಗಳೂರು-ಬೆಳಗಾವಿ ಮಧ್ಯೆ ವಂದೇ ಭಾರತ್ ರೈಲು ಸಂಚಾರದಿಂದ ಉತ್ತರ ಕರ್ನಾಟಕದ ಸಂಪರ್ಕ ಮತ್ತು ಅಭಿವೃದ್ಧಿಗೆ ದೊಡ್ಡ ಉತ್ತೇಜನ ದೊರೆಯಲಿದೆ. ಹಾಗಾಗಿ ಈ ರೈಲು ಸಂಚಾರ ಆರಂಭಿಸುವಂತೆ ಒತ್ತಾಯಿಸಿ ಸಚಿವ ಪ್ರಲ್ಹಾದ್​ ಜೋಶಿ ಅವರು ಫೆ.10ರಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಪತ್ರ ಬರೆದಿದ್ದರು.

ಇದಕ್ಕೆ ಸ್ಪಂದಿಸಿರುವ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಬೆಂಗಳೂರು-ಬೆಳಗಾವಿಗೆ ವಂದೇ ಭಾರತ್ ರೈಲು ಸಂಚಾರಕ್ಕೆ ಅನುಮೋದನೆ ನೀಡಿದ್ದಾಗಿ ತಿಳಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!