ಬೆಳಗಾವಿ ಗಡಿ ಉದ್ವಿಗ್ನ: ಶಾಂತಿ ಕಾಪಾಡುವಂತೆ ಮಹಾ ಸಿಎಂ ಮನವಿ, ಸಿಎಂ ಬೊಮ್ಮಾಯಿ ಸಹಮತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಳಗಾವಿ ಗಡಿ ವಿಷಯದಲ್ಲಿ ಕನ್ನಡಿಗರ ಆಕ್ರೋಶ ಮುಗಿಲು ಮುಟ್ಟಿದ್ದು, ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕರೆ ಮಾಡಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

ಗಡಿಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಮನವಿ ಮಾಡಿದ್ದು, ಸಿಎಂ ಬೊಮ್ಮಾಯಿ ಒಪ್ಪಿಗೆ ಸೂಚಿಸಿದ್ದಾರೆ.

ಈ ಬಗ್ಗೆ ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದು, ಮಹಾ ಸಿಎಂ ಶಿಂಧೆ ಅವರ ಜತೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ಉಭಯ ರಾಜ್ಯಗಳಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ನಾವಿಬ್ಬರೂ ಒಪ್ಪಿಕೊಂಡಿದ್ದೇವೆ ಎಂದಿದ್ದಾರೆ. ಎರಡೂ ರಾಜ್ಯಗಳ ಜನರ ನಡುವೆ ಸೌಹಾರ್ದಯುತ ಬಾಂಧವ್ಯ ಇರುವುದರಿಂದ ಕರ್ನಾಟದ ಗಡಿಗೆ ಸಂಬಂಧಿಸಿದಂತೆ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!