ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಉದ್ಯಮಿಯೊಬ್ಬರ ಇಬ್ಬರು ಮಕ್ಕಳನ್ನು ದುಷ್ಕರ್ಮಿಗಳು ಅವರ ನಿವಾಸದಿಂದಲೇ ಅಪಹರಿಸಿದ್ದ ಪ್ರಕರಣ ಇದೀಗ ಸುಖಾಂತ್ಯವಾಗಿದೆ.
ನಿನ್ನೆ ಗುರುವಾರ ದಿನದಂದು ಅಥಣಿ ಪಟ್ಟಣದ ಹುಲಗಬಾಳ ರಸ್ತೆಯ ಸ್ವಾಮಿ ಪ್ಲಾಟದ ಬಡಾವಣೆಯ ವಿಜಯ್ ದೇಸಾಯಿ ಎಂಬುವರ ಮನೆಗೆ ಹೊಕ್ಕು ಅವರ ಇಬ್ಬರು ಮಕ್ಕಳಾದ ಸ್ವಸ್ತಿ ವಿಜಯ್ ದೇಸಾಯಿ (4) ಮತ್ತು ವಿಯೋಮ್ ವಿಜಯ ದೇಸಾಯಿ (3) ದುಷ್ಕರ್ಮಿಗಳು ಅಪಹರಿಸಿದ್ದರು.
ಮಕ್ಕಳು ಅಪಹರಣಕ್ಕೊಳದ ಬಗ್ಗೆ ಪೊಲೀಸರಿಗೆ ದೂರು ನೀಡುತ್ತಿದ್ದಂತೆ ತಕ್ಷಣ ಕಾರ್ಯಪ್ರವೃತ್ತರಾದ ಅಥಣಿ ಪೊಲೀಸರು. ಮೂರು ತಂಡಗಳನ್ನು ಮಾಡಿಕೊಂಡು ಹುಡುಕಾಟ ನಡೆಸಿದ್ದರು. ಇದೀಗ ಮಕ್ಕಳ ಕಳ್ಳರ ಮೇಲೆ ಫೈರಿಂಗ್ ಮಾಡಿ ಅಥಣಿ ಪೊಲೀಸರು ಇಬ್ಬರೂ ಬಾಲಕರನ್ನು ಸುರಕ್ಷಿತವಾಗಿ ರಕ್ಷಿಸಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.